ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು
ಶಿಕಾರಿಪುರ : ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳ ತಾರಕಕ್ಕೇರಿ ಪತಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.
ದಂಪತಿ ನಡುವೆ ರಾತ್ರಿ ಇಡೀ ಜಗಳ ನಡೆದಿದ್ದು, ಬೆಳಗಿನಜಾವ ನಾಲ್ಕು ಗಂಟೆ ಸುಮಾರಿಗೆ ನಾಗರಾಜ ತನ್ನ ಪತ್ನಿ ರೇಣುಕಾಳನ್ನು ಕಂದಲಿಯಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ನಾಗರಾಜ್ ಪ್ಯಾಸೆಂಜರ್ ಆಟೋ ಓಡಿಸಿ ಜೀವನ ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದೆ.
ಮೃತ ರೇಣುಕಾಳ ಶವ ಮನೆ ಮುಂಭಾಗದಲ್ಲಿ ಪತ್ತೆಯಾಗಿದ್ದು, ಆರೋಪಿ ನಾಗರಾಜನನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಎಸ್‌ಪಿ ಮಿಥುನ್ ಕುಮಾರ್ ವಾಟ್ಸಾಪ್ ಮೂಲಕ ಮಾಹಿತಿ ರವಾನೆ ಮಾಡಿದ್ದು, ಶಿಕಾರಿಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದು ಕೊಲೆ ನಡೆದಿದೆ. 45 ವರ್ಷದ ನಾಗರಾಜ್ ಎಂಬಾತ ತನ್ನ ಪತ್ನಿಯನ್ನ ಕೊಲೆ ಮಾಡಿದ್ದಾನೆ. ಆತನನ್ನ ಬಂಧಿಸಲಾಗಿದ್ದು ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ವೈವಾಹಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ ಈ ಕೃತ್ಯವೆಸಗಿರುವುದಾಗಿ ತಿಳಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…