ಆನ್‌ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್ ಗೇಮಿಂಗ್(online gaming) ವ್ಯಾಮೋಹಕ್ಕೆ ಸಿಲುಕಿ 10 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮನನೊಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಬೇಲೂರು ಗ್ರಾಮದಲ್ಲಿ ನಡೆದಿದೆ.
ಹುಲಸೂರ ತಾಲೂಕಿನ ಬೇಲೂರ ಗ್ರಾಮದ ವಿಜಯಕುಮಾರ್ ಹೊಳ್ಳೆ (25) ಮೃತ ಯುವಕ.
ಡಿ.ಫಾರ್ಮ್ ಪದವೀಧರನಾಗಿದ್ದ ಯುವಕ, ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳಿಂದ ಆನ್‌ಲೈನ್ ಗೇಮಿಂಗ್ ವ್ಯಾಮೋಹಕ್ಕೆ ಸಿಲುಕಿ 10 ಲಕ್ಷಕ್ಕೂ ಅಧಿಕ ಹಣ ಸಾಲ ಕಳೆದುಕೊಂಡಿದ್ದ ಎನ್ನಲಾಗಿದೆ.
ಕಳೆದುಕೊಂಡ ಹಣ ಕುಟುಂಬಸ್ಥರು ಭರಿಸಿ ಮತ್ತೆ ಆನ್ ಲೈನ್ ಗೇಮ್ ಆಡದಂತೆ ಬುದ್ದಿಮಾತು ಹೇಳಿದ್ದರು. ಆದರೂ ಕೂಡ ಯುವಕ ಮತ್ತೆ ಸಾಲ ಮಾಡಿಕೊಂಡು ಆನ್ ಲೈನ್ ಗೇಮ್ ಆಡುವ ಮೂಲಕ ಹಣ ಕಳೆದುಕೊಂಡಿದ್ದ ಎನ್ನಲಾಗಿದೆ.
ಸಾಲ ಮಾಡಿದ ವಿಷಯ ಮನೆಯಲ್ಲಿ ಗೊತ್ತಾಗುತ್ತದೆ ಎನ್ನುವ ಕಾರಣಕ್ಕೆ ವಿಜಯಕುಮಾರ್ ಗುರುವಾರದಂದು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…