KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಮೃತಪಟ್ಟಿದ್ದಾರೆ.
ದಾವಣಗೆರೆ ನಗರದ ನಿವಾಸಿ ಪರಮೇಶ್ವರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ರವಾನಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಅದೇ ದಿನ ಸಂಜೆ ಮೃತಪಟ್ಟಿದ್ದಾರೆ.
ದಾವಣಗೆರೆಯಿಂದ 14/12/24 ರಂದು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿ ಆನೆಗುಡ್ಡೆ , ಮುರುಡೇಶ್ವರ ಹಾಗೂ ಕೊಲ್ಲೂರು ದೇವಸ್ಥಾನಕ್ಕೆ ತೆರಳಿ ಹಿಂದಿರುಗುತಿದ್ದಾಗ ಶಾಂತಪುರ ಬಳಿ ಅಪಘಾತವಾಗಿ ಕಾರಿನಲ್ಲಿದ್ದ ಪರಮೇಶ್ವರಪ್ಪ ರವರಿಗೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿತ್ತು.ಇದೇ ಕಾರಿನಲ್ಲಿದ್ದ ದಾವಣಗೆರೆ ಮೂಲದ ಬಸವರಾಜ್ ,ವೆಂಕಟೇಶ್ವರಪ್ಪ ಹಾಗೂ ಹಾಲೇಶ್ ರವರಿಗೆ ತಲೆಗೆ ಗಂಭೀರ ಗಾಯಗಳಾಗಿತ್ತು.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.