ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು
ಆಯನೂರು ಸಮೀಪದ ದೊಡ್ಡದಾನವಂದಿ ಬಳಿ ಭಾನುವಾರ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟಿದ್ದಾರೆ.
ಶಿವಮೊಗ್ಗದ ಗಾಡಿಕೊಪ್ಪದ ನಿವಾಸಿ, ನಿವೃತ್ತ ಸಹಾಯಕ ಇಂಜಿನಿಯರ್ ನಾಗರಾಜ್ ( 75) ಮೃತಪಟ್ಟವರು. ಅವರ ಪತ್ನಿ ಸೌಭಾಗ್ಯವತಿ ಹಾಗೂ ಪುತ್ರ ಅಭಿಲಾಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಾಗರದ ವಿಟ್ಲುಕೊಪ್ಪದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಿ ಶಿವಮೊಗ್ಗಕ್ಕೆ ವಾಪಸ್ ಬರುತ್ತಿದ್ದಾಗ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.