ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ
ರಿಪ್ಪನ್‌ಪೇಟೆ: ಸಮೀಪದ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೀರ್ತಿ ರಾಜ್‌ಗೌಡ,ಉಪಾಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೂ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅರಸಾಳು ಗ್ರಾಮ ಪಂಚಾಯತ್ ಪಿಡಿಒ ರವಿ ಅವಿರೋಧ ಆಯ್ಕೆ ಘೋಷಿಸಿದರು.
ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ , ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ , ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ , ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ,ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಎಂ ಪರಮೇಶ್ , ಮುಖಂಡರಾದ ಸುರೇಶ್ ಸಿಂಗ್ , ನಾಗಾರ್ಜುನ ಸ್ವಾಮಿ , ಈಶ್ವರಪ್ಪ ಗೌಡ ,ದೊಡ್ಡೆಗೌಡ್ರು ,ರಾಜು ಆಲುವಳ್ಳಿ ಹಾಗೂ ಇನ್ನಿತರರಿದ್ದರು.