ಅಕ್ಕಿ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ: ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ
ಭದ್ರಾವತಿ: ಇಲ್ಲಿನ ಚನ್ನಗಿರಿ ರಸ್ತೆಯಲ್ಲಿರುವ ರೈಸ್ ಮಿಲ್‌ನಲ್ಲಿ ಗುರುವಾರ ಸಂಜೆ ಬಾಯ್ಲರ್ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡಿದ್ದಾರೆ. ಒಬ್ಬ ನಾಪತ್ತೆಯಾಗಿದ್ದಾನೆ.
ಸ್ಫೋಟದಿಂದ ಕಟ್ಟಡ ಭಾಗಶಃ ಕುಸಿದು ಬಿದ್ದಿದೆ. ಕಾರ್ಖಾನೆಯ ಹಲವು ವಸ್ತ್ತುಗಳು ದೂರ ಹಾರಿಹೋಗಿ ಬಿದ್ದಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ವೇಳೆ ಒಟ್ಟು ೬ ಜನರು ಮಿಲ್‌ನಲ್ಲಿ ಕೆಲಸದಲ್ಲಿದ್ದರು. ಅವಶೇಷಗಳಡಿ ಸಿಲುಕಿರುವ ಇನ್ನೊಬ್ಬನಿಗಾಗಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸ್ಫೋಟದಿಂದ ಹಾರಿದ ವಸ್ತುಗಳು ಬಡಿದು ಹಲವರು ಗಾಯಗೊಂಡಿದ್ದಾರೆ. ಪಕ್ಕದಲ್ಲಿರುವ ಅಣ್ಣಾನಗರ, ಹೊಸಮನೆ ಭಾಗದ ಹಲವು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.
ಹೊಸಮನೆ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಬೆಂಕಿ ಆರಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…