Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಶಿವಮೊಗ್ಗ: ಸಾಗರ ತಾಲ್ಲೂಕು ಆನಂದಪುರ ಸಮೀಪದ ಇವತ್ತು ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಬಸ್ ಹಾಗೂ ಕಾರು ನಡುವಿನ ಡಿಕ್ಕಿಯಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ.
ಮೃತರನ್ನ ದೊಡ್ಡಬಳ್ಳಾಪುರದ ಮೂಲದವರು ಎನ್ನಲಾಗಿದ್ದು, ಅಕ್ಷಯ್ ಹಾಗೂ ಶರಣ್ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು.
ಇಲ್ಲಿನ ಮುರುಘಾಮಠದ ಸಮೀಪ ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಎರಟಿಗಾ ಕಾರು ಧರ್ಮಸ್ಥಳಕ್ಕೆ ಹೋಗುವ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿ ಪುಡಿಪುಡಿಯಾಗಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ಬೆನ್ನಲ್ಲೆ ಸ್ಥಳಕ್ಕೆ ಆನಂದಪುರ ಪೊಲೀಸ್ ಠಾಣೆ ಪೊಲೀಸರು ಧಾವಿಸಿ ತನಿಖೆ ನಡೆಸಿದ್ದಾರೆ.
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…