Headlines

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ

ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಹಿರಿಯ ನ್ಯಾಯವಾದಿ ಡಾ ಕೆ ವೈ ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ಹೊಸನಗರ ತಾಲ್ಲೂಕಿನ ಅಮೃತ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಅರಿವು ವಿಚಾರವಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಬರೆದ ಪುಸ್ತಕವನ್ನು ಶಿವಮೊಗ್ಗದ ಹಿರಿಯ ನ್ಯಾಯವಾದಿ ಡಾ. ಕೆ. ವೈ. ರಾಮಚಂದ್ರಪ್ಪ ಇವರು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮಾತನಾಡಿ ‘ಶ್ರೇಷ್ಠವಾದ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಅಲ್ಲದೇ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಹಕ್ಕುಗಳನ್ನು ನೀಡಿದ್ದು, ಅವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಜನರು ತಮ್ಮ ಹಕ್ಕುಗಳನ್ನು ಅನುಭವಿಸುವುದರ ಜೊತೆಗೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

‘ದೇಶದಲ್ಲಿನ ಎಲ್ಲ ವರ್ಗದವರಿಗೂ ಸಂವಿಧಾನದಲ್ಲಿ ಸಮಾನವಾದ ಅವಕಾಶ ಕಲ್ಪಿಸಲಾಗಿದೆ. ಸಂವಿಧಾನದಡಿ ಸರ್ಕಾರಗಳು ಜನರಿಗೆ ಹಲವು ಸವಲತ್ತುಗಳನ್ನು ನೀಡುತ್ತಿದ್ದು, ಇದನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳಬೇಕು. ಆ ಮೂಲಕ ಎಲ್ಲರೂ ಒಂದೇ ಭಾವನೆ ಹೊಂದಬೇಕು’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಮೃತ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಚಿನ್ ಗೌಡ, ಉಪಾಧ್ಯಕ್ಷೆ ಯಶೋಧ, ಯೋಗೇಂದ್ರ, ಮುಖ್ಯ ಶಿಕ್ಷಕ ಎನ್. ಎಸ್. ಸತ್ಯನಾರಾಯಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *