ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್
ರಿಪ್ಪನ್ಪೇಟೆ : ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ ಹೇಳಿದರು.
ರಿಪ್ಪನ್ಪೇಟೆಯ ಗುಡ್ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮತ್ತು ಅವರ ಪ್ರತಿಭೆಯನ್ನು ಹೊರಹಾಕಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ. ಎಲ್ಲಾ ಮಕ್ಕಳು ಸಮರ್ಥರು. ಎಲ್ಲರಲ್ಲೂ ಒಂದೊಂದು ವಿಧದ ಪ್ರತಿಭೆ ಅಡಗಿದ್ದು ಅವುಗಳನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ನಮ್ಮ ಶಿಕ್ಷಕರು ಪೋಷಕರು ಮಾಡಬೇಕು ಎಂದರು.
ಗುಡ್ಶಫರ್ಡ್ ಹಿರಿಯ ಪ್ರಾಥಮಿಕ ಶಾಲೆಯ ಕಾರ್ಯದರ್ಶಿ ರೆ.ಪಾ.ಬಿನೋಯಿ ಮ್ಯಾಥ್ಯೂ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ವಾರ್ಷಿಕೋತ್ಸವ ಸಮಾರೋಪ ಸಮಾರಂಭವನ್ನು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ದನಲಕ್ಷ್ಮಿ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಗುಡ್ಶಫರ್ಡ್ ಶಾಲಾ ಪೋಷಕ ಸಮಿತಿ ಅಧ್ಯಕ್ಷ ಬಿ.ಹಸನಬ್ಬ, ಸಬಾಸ್ಟಿನ್ ಮ್ಯಾಥ್ಯೂಸ್, ಸಿ.ಆರ್.ಪಿ. ಎನ್.ಮಂಜುನಾಥ, ಮುಖ್ಯ ಶಿಕ್ಷಕಿ ಸಿಸ್ಟರ್ ಜೋಸ್ಫಿನ್ ಇನ್ನಿತರರು ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್