ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ: ಐವರಿಗೆ ಗಾಯ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ.
ಜೀಪ್ ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಎಲ್ಲರೂ ಕೇರಳದಿಂದ ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.