HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಇಂದು ಬೈಕ್ ಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ.
ಹೊಸಗದ್ದೆ ಗ್ರಾಮದ ಲತೇಶ್ ಎಂಬುವವರು ತಮ್ಮ ಮನೆಯ ಮುಂಭಾಗದಲ್ಲಿ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಬೈಕ್ ನ್ನು ಬುಧವಾರ ರಾತ್ರಿ ನಿಲ್ಲಿಸಿದ್ದರು.ತಡರಾತ್ರಿ ಯಾರೋ ಕಿಡಿಗೇಡಿಗಳು ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಬೆಂಕಿ ಹತ್ತಿಕೊಂಡು ಶಬ್ದವಾದ ಹಿನ್ನಲೆಯಲ್ಲಿ ಮನೆಯಿಂದ ಹೊರಬಂದ ಲತೇಶ್ ಹಾಗೂ ಕುಟುಂಬಸ್ಥರು ಬೆಂಕಿಯನ್ನು ಆರಿಸಿದ್ದಾರೆ.
ಕೂಡಲೇ 112 ಗೆ ಕರೆ ಮಾಡಿ ವಿಷಯ ತಿಳಿಸಿದ್ದು ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.