NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ: ಬಿ.ಆರ್.ಅಂಬೇಡ್ಕರ್ ಜಗತ್ತು ಕಂಡ ಅಪ್ರತಿಮ ಹೋರಾಟಗಾರರು, ಅವರು ಸಂವಿಧಾನ ರಚಿಸದೇ ಇದ್ದಿದ್ದರೆ ಇಂದು ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. ಇದನ್ನು ಅರಿತುಕೊಳ್ಳದ ಅಮಿತ್ ಶಾ ಈ ದೇಶದ ಕೇಂದ್ರ ಗೃಹ ಸಚಿವರಾಗಿರುವುದು ನಮ್ಮೆಲ್ಲರ ದುರ್ದೈವ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನಕುಮಾರ್ ಹೇಳಿದರು.
ಒಬ್ಬ ಜನಪ್ರತಿನಿಧಿಯಾಗಿ ಅಂಬೇಡ್ಕರ್‌ರವರಂತಹವರ ಮಹಾನ್ ನಾಯಕರ ಹೋರಾಟದ ಫಲವಾಗಿ ಸೃಷ್ಟಿಯಾಗಿರುವ ಸಂಸತ್ತಿನಲ್ಲೇ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಎಂದು ಹೇಳುವುದು ಈಗ ಶೋಕಿ ಆಗಿಬಿಟ್ಟಿದೆ. ಇಷ್ಟೊಂದು ಬಾರಿ ದೇವರ ಹೆಸರು ಹೇಳಿದ್ದರೆ ಏಳು ಜನ್ಮಗಳವರೆಗೆ ಸ್ವರ್ಗ ಪ್ರಾಪ್ತಿ ಆಗುತ್ತಿತ್ತು’ ಎಂದು ಅಮಿತ್ ಶಾ ಮತಿಕೆಟ್ಟವರಂತೆ ಮಾತನಾಡಿದ್ದಾರೆ ಇದು ಅಕ್ಷಮ್ಯ ಎಂದರು.
ದಾಸ್ಯ, ದೌರ್ಜನ್ಯ, ಶೋಷಣೆಯಲ್ಲೇ ಇದ್ದ ಕೋಟ್ಯಂತರ ಭಾರತೀಯರು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದಾಗಿ ಇಂದು ಸ್ವಾಭಿಮಾನದಿಂದ ಬದುಕುವಂತಾಗಿದೆ. ಈ ದೇಶದ ಇತಿಹಾಸ, ಬಲಿದಾನ ಮಾಡಿದ ನಾಯಕರ ಬಗ್ಗೆ ಅರಿವಿಲ್ಲದೇ ಇರುವಂತಹ ಅಯೋಗ್ಯ ವ್ಯಕ್ತಿ ಅಮಿತ್ ಶಾ ಒಂದು ಕ್ಷಣವೂ ಕೇಂದ್ರ ಸಚಿವ ಸ್ಥಾನದಲ್ಲಿ ಮುಂದುವರೆಯಬಾರದು. ರಾಷ್ಟ್ರಪತಿಗಳು ಕೂಡಲೇ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು HC ಯೋಗೇಶ್ ಆಕ್ರೋಶ ವ್ಯಕ್ತಪಡಿಸಿದರು.
ಅಮಿತ್ ಶಾ ಸಚಿವ ಸ್ಥಾನದಲ್ಲಿ ಮುಂದುವರೆದಲ್ಲಿ ಎನ್.ಎಸ್‌ಯು.ಐ. ದೇಶಾದ್ಯಂತ ತೀವ್ರ ಹೋರಾಟ ಮಾಡಲಿದೆ ಎಂದು ಈ ಮೂಲಕ NSUI ಸಂಘಟನೆ ಜಿಲ್ಲಾಧ್ಯಕ್ಷ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ್, ಖಲೀಮ್ ಪಾಷ, ರಮೇಶ್ ಹೆಗಡೆ, ವಿಶ್ವನಾಥ್ ಕಾಶಿ, ಚೇತನ್, ಮಧುಸುಧನ್, ಅಕ್ಬರ್, NSUI ತಾಲೂಕು ಅಧ್ಯಕ್ಷ ಹರ್ಷಿತ್, ನಗರಾಧ್ಯಕ್ಷ ಚರಣ್, ಅಬ್ದುಲ್, ಗೌತಮ್, ಮಲಗುಪ್ಪ ಶಿವು, ಕಾರ್ಯಕರ್ತರು ಪಾಲ್ಗೊಂಡು ಆಕ್ರೋಶ ವ್ಯಕ್ತಪಡಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್