ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ

ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಜಾನ್ ಡೀರ್ ಟ್ರ್ಯಾಕ್ಟರ್ ಷೋ ರೂಂ ನಲ್ಲಿ ಸರ್ವಿಸ್ ನಲ್ಲಿ ಲೋಪವೆಸಗಿದ್ದು ಈ ಬಗ್ಗೆ ವಿಚಾರಿಸಿದರೆ ಷೋರೂಂ ಮಾಲೀಕ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ರೈತರು ಹಾಗೂ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಟ್ರ್ಯಾಕ್ಟರ್ ಚಾಲಕ ವಾಹನಕ್ಕೆ ಹಾಗೂ ತನ್ನ ಮೈ ಮೇಲೆ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕಾರಗಡಿ ಸಮೀಪದ ಮಂಡ್ರೊಳ್ಳಿಯ ಲಕ್ಷ್ಮಿನಾರಾಯಣ ಎಂಬ ರೈತರೊಬ್ಬರಿಗೆ ಸೇರಿದ ಟ್ರ್ಯಾಕ್ಟರ್ ಗೆ ಐದು ವರ್ಷ ಗ್ಯಾರಂಟಿ ಇದೆ ಎಂದು ಹೇಳಲಾಗಿದ್ದರೂ ಈಗ ಗ್ಯಾರಂಟಿಯಿರುವ ಬಿಡಿಬಾಗಕ್ಕೆ 40 ಸಾವಿರ ರೂ ಹಣ ಕೇಳುತಿದ್ದಾರೆ ಎಂದು ಆರೋಪಿಸಿ ಹಲವಾರು ರೈತರು ಹಾಗೂ ಕರ್ನಾಟಕ ಕಾರ್ಮಿಕ ಪರಿಷತ್ ವತಿಯಿಂದ ಷೋರೂಂ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದರು.

ನಡೆದಿದ್ದೇನು..!!??

ಕಾರಗಡಿ ಸಮೀಪದ ಲಕ್ಷ್ಮಿನಾರಾಯಣ ಎಂಬುವವರು ಎರಡು ವರ್ಷಗಳ ಹಿಂದೆ ಲೋಕೆಶ್ವರ್ ರಾವ್ ಎಂಬುವವರ ಮಾಲೀಕತ್ವದ ಕಾಳೆ ಅಗ್ರಿಟೆಕ್ ನಲ್ಲಿ ಜಾನ್ ಡೀರ್ ಟ್ರ್ಯಾಕ್ಟರ ಖರೀದಿಸಿದ್ದು ಮಾರನೇ ದಿನವೇ ಮುಂಭಾಗದ ವೀಲ್ ಬಳಿ ಸಮಸ್ಯೆ ಎದುರಾಗಿತ್ತು ಕೂಡಲೇ ಮಾಲೀಕರಿಗೆ ತಿಳಿಸಿದ್ದರು ಏನೂ ಆಗುವುದಿಲ್ಲ ಓಡಿಸಿಕೊಂಡು ಇರಿ ಅದಕ್ಕೆ ಐದು ವರ್ಷ ವಾರಂಟಿ ಇದೆ ಏನಾದರೂ ಆದರೆ ನಮ್ಮ ಸಂಸ್ಥೆಯ ಜವಬ್ದಾರಿ ಎಂದು ಹೇಳಿ ಕಳುಹಿಸಿಕೊಟ್ಟಿದ್ದು ಅವತ್ತಿನಿಂದ ಪದೇ ಪದೇ ವಾಹನ ಕೈಕೊಡುತಿದ್ದು ಈಗ ವಾಹನ ಓಡಿಸಲು ಸಾಧ್ಯವಾಗದ ಪರಿಸ್ಥಿತಿ ಉಂಟಾದ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆಯಲ್ಲಿರುವ ಕಾಳೆ ಅಗ್ರಿಟೆಕ್ ಷೋರೂಂ ಗೆ ಸರ್ವಿಸ್ ಗೆ ಬಿಡಲಾಗಿತ್ತು ಆದರೆ ಈಗ ಎಪ್ಪತ್ತು ಸಾವಿರ ಕಟ್ಟಬೇಕು ಇಲ್ಲದಿದ್ದಲಿ ಸರಿ ಮಾಡಲು ಆಗುವುದಿಲ್ಲ ಎಂದು ಉಡಾಫೆಯಾಗಿ ಉತ್ತರಿಸಿದ್ದಾರೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದೇವು ಅದಕ್ಕೆ ಸ್ಪಂದಿಸದೇ ಇದ್ದ ಹಿನ್ನಲೆಯಲ್ಲಿ ಇಂದು ಪ್ರತಿಭಟನೆ ನಡೆಸಿದ್ದೆವೆ. ಇನ್ನೂ ರೈರತು ಸಬ್ಸಿಡಿ ಹಣದಲ್ಲಿ ಬದುಕುವವರು ನಾವು ದೇಶಕ್ಕೆ ಟ್ಯಾಕ್ಸ್ ಕಟ್ಟುವುದು ನೀವು ಮಜಾ ಮಾಡುವುದಾ ಸುಮ್ಮನೆ ಹಣ ಕಟ್ಟಿ ಎಂದು ರೈತರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದರೆ ಎಂದು ಟ್ರ್ಯಾಕ್ಟರ್ ಚಾಲಕ ಸತೀಶ್ ತನ್ನ ನೋವನ್ನು ಮಾದ್ಯಮದೊಂದಿಗೆ ಹಂಚಿಕೊಂಡರು..

ಬೆಂಕಿ ಹಚ್ಚಿಕೊಳ್ಳಲು‌ ಮುಂದಾದ ಟ್ರ್ಯಾಕ್ಟರ್ ಚಾಲಕ

ಇಂದು ಮದ್ಯಾಹ್ನದಿಂದ ಪಟ್ಟಣದ ಟ್ರ್ಯಾಕ್ಟರ್ ಷೋರೂಂ ಮುಂಭಾಗದಲ್ಲಿ ಕಾರ್ಮಿಕ ಪರಿಷತ್ ಹಾಗೂ ರೈತರು ಪ್ರತಿಭಟನೆ ನಡೆಸುತಿದ್ದರೂ ಯಾವುದಕ್ಕೂ ಕ್ಯಾರೆ ಎನ್ನದೇ ಸ್ಥಳಕ್ಕೆ ಬರಲು ಒಪ್ಪದ ಮಾಲೀಕನ ನಡೆಯನ್ನು ಖಂಡಿಸಿ ಟ್ರ್ಯಾಕ್ಟರ್ ಚಾಲಕ ಸತೀಶ್ ವಾಹನದಲ್ಲಿದ್ದ ಡಿಸೇಲ್ ನ್ನು ಟ್ರ್ಯಾಕ್ಟರ್ ಮೇಲೆ ಹಾಗೂ ತನ್ನ ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು‌ ಮುಂದಾದ ಘಟನೆ ನಡೆಯಿತು ಈ ಸಂಧರ್ಭದಲ್ಲಿ ಸ್ಥಳದಲ್ಲಿದ್ದವರು ಆತನನ್ನು ತಡೆದು ಮುಂದಾಗುವ ಭಾರಿ ಆನಾಹುತ ತಪ್ಪಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪಿಎಸ್‌ಐ ಪ್ರವೀಣ್ ಎಸ್ ಪಿ

ರೈತರ ಪ್ರತಿಭಟನೆಯ ಕಾವು ಹೆಚ್ಚುತಿದ್ದಂತೆ ಸ್ಥಳಕ್ಕಾಗಮಿಸಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಸ್ಥಳದಲ್ಲಿದ್ದ ಪ್ರತಿಭಟನಕಾರರ ಅಹವಾಲನ್ನು ಆಲಿಸಿ ಷೋರೂಂ ಮಾಲೀಕರನ್ನು ಠಾಣೆ ಕರೆಸಿ ಈ ಬಗ್ಗೆ ತನಿಖೆ ಕೈಗೊಂಡು ರೈತನಿಗೆ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನಕಾರರು ತಮ್ಮ ಧರಣಿ ಹಿಂಪಡೆದರು.

ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಪದಾಧಿಕಾರಿಗಳಾದ ನಾಗೇಶ್ , ವೇದಾವತಿ , ಅನ್ನಪೂರ್ಣ , ಗೀತಾ ,ಸೀತಮ್ಮ , ರೈತರು ಹಾಗೂ ಸಾರ್ವಜನಿಕರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

18 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

19 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

23 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago