ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ
ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ ಬಂದಿದೆ. ‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಎಂದು ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆಯಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ. ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳು. ಇವರಿಬ್ಬರೂ ಪರಸ್ಪರ ಗರ್ಲ್ ಫ್ರೆಂಡ್ಸ್ ಅದಲು ಬದಲು ಮಾಡಿಕೊಂಡು ಸಹಕರಿಸುವಂತೆ ಒತ್ತಾಯಿಸಿದ್ದು, ಸಹಕರಿಸದಿದ್ದಾಗ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿಯೊಬ್ಬಳು ನೀಡಿದ್ದ ದೂರಿನ ಅನ್ವಯ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಹರೀಶ್, ಆಕೆಯನ್ನು ಪ್ರೀತಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಬೆಂಗಳೂರು ಹೊರವಲಯದಲ್ಲಿ ಪಾರ್ಟಿಗೆಂದು ಕರೆದೊಯ್ದು ಸ್ನೇಹಿತನೊಂದಿಗೆ ಸಹಕರಿಸುವಂತೆ ಒತ್ತಾಯಿಸಿದ್ದ. ಆಕೆ ಒಪ್ಪದಿದ್ದಾಗ ಆರೋಪಿಗಳು ಅತ್ಯಾಚಾರವೆಸಗಿದ್ದಾರೆಂದು ದೂರು ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸ್ವಿಂಗರ್ಸ್ ವಾಟ್ಸ್ ಗ್ರೂಪ್ ವಾಟ್ಸ್ ಗ್ರೂಪ್ ಮಾಡಿಕೊಂಡಿದ್ದ ‘ಸ್ವಿಂಗರ್ಸ್’ ಟೀಂ, ಬೆಂಗಳೂರು ಹೊರ ವಲಯದಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. ಪಾರ್ಟಿಗೆ ಕಪಲ್ಸ್ ಜೊತೆಗೆ ಆಸಾಮಿಗಳು ತಮ್ಮ ಪ್ರಿಯತಮೆಯರನ್ನು ಪರಸ್ಪರ ಎಕ್ಸ್ ಚೇಂಜ್ ಮಾಡಿಕೊಳ್ಳುತ್ತಿದ್ದರು ಅಷ್ಟೇ ಅಲ್ಲ ಒಬ್ಬನ ಗರ್ಲ್ ಫ್ರೆಂಡ್ ಜೊತೆಗೆ ಮತ್ತೊಬ್ಬ ಬೆಡ್ ಶೇರ್ ಮಾಡುತ್ತಿದ್ದ. ಇದೇ ರೀತಿ ಯುವತಿಯನ್ನು ಹರೀಶ್ ಎಂಬಾತ ಕೂಪಕ್ಕೆ ದೂಡಿದ್ದ. ಒಪ್ಪದಿದ್ದಾಗ ಸ್ನೇಹಿತರ ಜೊತೆಗೆ ಸೇರಿ ಅತ್ಯಾಚಾರ ಮಾಡಿದ್ದಾನೆ.
ದೂರು ಆಧರಿಸಿ ಸಿಸಿಬಿ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ಮೊಬೈಲ್ ಪರಿಶೀಲನೆ ವೇಳೆ ಭಯಾನಕ ಸತ್ಯ ಬಯಲಾಗಿದೆ. ಮೊಬೈಲ್ ನಲ್ಲಿ ಹತ್ತಾರು ಯುವತಿಯರ ಬೆತ್ತಲೆ ಫೋಟೊ ಪತ್ತೆಯಾಗಿವೆ. ಇನ್ನು ಏಕಾಂತದಲ್ಲಿದ್ದ ವಿಡಿಯೋಗಳನ್ನು ಸಹ ಆರೋಪಿಗಳು ರೆಕಾರ್ಡ್ ಮಾಡಿಟ್ಟುಕೊಂಡಿರುವುದು ಪತ್ತೆಯಾಗಿದೆ. ಅದೇ ವೀಡಿಯೋ ತೋರಿಸಿ ಯುವತಿಗೆ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್