ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್
ಲಾಡ್ಜ್‌ವೊಂದ ಮೇಲೆ ಪೊಲೀಸರು ದಾಳಿ ನಡೆಸಿ ಅಂದರ್ ಬಾಹರ್ ಆಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಲಾಡ್ಜ್‌ನ ಕೊಠಡಿ ಸಂಖ್ಯೆ 303ರಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದು ಕೇಸ್ ದಾಖಲೊಸಿದ್ದಾರೆ.
ದೊಡ್ಡಪೇಟೆ ಠಾಣೆ ಸಬ್ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಆರೋಪಿಗಳ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.