POSTMAN NEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

GridArt 20241210 195332476.jpg

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಆನೆಗದ್ದೆ ಸರ್ಕಲ್ ನ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.

ದಾಳಿಯಲ್ಲಿ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ ಮತ್ತು ಮಧುಸೂಧನ್ ಇದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.