POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ – 200 ಕೆಜಿ ಗೊಮಾಂಸ ಪತ್ತೆ: ಓರ್ವ ಸೆರೆ

Screenshot 20241123 142643 Chrome.jpg

ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ – 200 ಕೆಜಿ ಗೊಮಾಂಸ ಪತ್ತೆ: ಓರ್ವ ಸೆರೆ

ಶಿವಮೊಗ್ಗ: ಅಕ್ರಮ ಕಸಾಯಿ ಖಾನೆಯ ಮೇಲೆ ಶಿರಾಳಕೊಪ್ಪ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ. ದಾಳಿಯಲ್ಲಿ 200 ಕೆಜಿ ಗೋ ಮಾಂಸವನ್ನು ಪತ್ತೆಯಾಗಿದೆ.

ನಿನ್ನೆ ಶಿರಾಳಕೊಪ್ಪ ಠಾಣೆ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದಲ್ಲಿರುವ ಕಸಾಯಿ ಖಾನೆಯಲ್ಲಿ ಗೋಹತ್ಯೆ ನಡೆಯುತ್ತಿದೆ ಎಂಬ ಮಾಹಿತಿ ಆಧಾರದ ಮೇರೆಗೆ ಪಿಎಸ್ಐ ಪ್ರಶಾಂತ್ ಕುಮಾರ್ ಟಿಬಿ ಮತ್ತು ಸಿಬ್ಬಂದಿಗಳು ಧಾಳಿ ಮಾಡಿದ್ದಾರೆ.

ದಾಳಿಯಲ್ಲಿ ಪರವಾನಗಿ ಇಲ್ಲದೆ ಕಸಾಯಿ ಖಾನೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ತಬ್ರೇಜ್ ಎಂಬ  ಆರೋಪಿತನನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿತನಿಂದ 200 ಕೆಜಿ ಮಾಂಸವನ್ನು ವಶಕ್ಕೆ ಪಡೆದು ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.