ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ | ನಾಳೆ ಸರ್ಕಾರಿ ರಜೆ | 3 ದಿನ ಶೋಕಾಚರಣೆ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ | ನಾಳೆ ಸರ್ಕಾರಿ ರಜೆ | 3 ದಿನ ಶೋಕಾಚರಣೆ

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್​ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. 2009 ರಿಂದ ಅಕ್ಟೋಬರ್ 2012 ರವರೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು 1999 ರಿಂದ 2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿ ಮತ್ತು ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು . 2004 ರಿಂದ 2008. ಎಸ್‌ಎಂ ಕೃಷ್ಣ ಅವರು ಡಿಸೆಂಬರ್‌ನಿಂದ ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1989 ರಿಂದ ಜನವರಿ 1993. ಅವರು 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. 2023 ರಲ್ಲಿ, ಕೃಷ್ಣ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಲಾಯಿತು.

ಮಾಜಿ ಸಿಎಂ ನಿಧನದ ಹಿನ್ನಲೆ ಸರ್ಕಾರಿ ರಜೆ :

ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ರವರು ನಿಧನರಾದ ಹಿನ್ನೆಲ್ಲೆಯಲ್ಲಿ ರಾಜ್ಯಸರ್ಕಾರ ಮೂರು ದಿನ ಶೋಕಾಚರಣೆ ಘೋಷಿಸಿದೆ. ದಿವಂಗತರ ಗೌರವಾರ್ಥವಾಗಿ ದಿನಾಂಕ:11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಿದೆ. ದಿನಾಂಕ:10.12.2024 ರಿಂದ ದಿನಾಂಕ:12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕು ಎಂದು ಸೂಚಿಸಲಾಗಿದೆ. 

ಶಿವಮೊಗ್ಗ ಜಿಲ್ಲಾ ಮುಖಂಡರಿಂದ ಸಂತಾಪ :

ಮಾಜಿ ಸಿಎಂ SM ಕೃಷ್ಣರವರ ನಿಧನಕ್ಕೆ ಶಿವಮೊಗ್ಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರು ಎಸ್‌ಎಂಕೃಷ್ಣರ ನಿವಾಸಕ್ಕೆ ತೆರಳಿ ಅವರ ಅಂತಿಮ  ದರ್ಶನ ಪಡೆದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. 

ಇನ್ನೂ ಈ ಸಂಬಂಧ ತೀರ್ಥಹಳ್ಳಿಯಲ್ಲಿ ಮಾತನಾಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಸ್ .ಎಂ ಕೃಷ್ಣ  ಅಗಲಿಕೆ ನೋವು ತಂದಿದೆ. ಸಜ್ಜನ ರಾಜಕಾರಣಿಯಾಗಿದ್ದ ಅವರು ತೀರ್ಥಹಳ್ಳಿಯ ಅಳಿಯರಾಗಿದ್ದರು. ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿಯಿತ್ತು. ನನ್ನ ಕ್ಷೇತ್ರದ ಕಾಮಗಾರಿಗೆ ಅನುದಾನ ನೀಡುತ್ತಿದ್ದರು. ಸೌಮ್ಯ ಸ್ವಭಾವದವರಾಗಿದ್ದ ಅವರ ಅಗಲಿಕೆ ದುಃಖ ತಂದಿದೆ ಎಂದಿದ್ದಾರೆ. 

ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಯನ್ನು ನಿರ್ವಹಿಸಿದ್ದ ಕೇಂದ್ರದ ಮಾಜಿ ಸಚಿವ ಎಸ್ ಎಂ ಕೃಷ್ಣರವರ ಇನ್ನಿಲ್ಲ ಎಂಬುದು ಅತ್ಯಂತ ನೋವು ಮತ್ತು ದುಃಖದ ಸಂಗತಿಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಪತ್ರಿಕಾ ಹೇಳಿಕೆಯಲ್ಲಿ  ತಿಳಿಸಿದ್ದಾರೆ. ಎಸ್‌ಎಂ ಕೃಷ್ಣರವರು ನಮ್ಮ ಜಿಲ್ಲೆಯ ಅಳಿಯ ಎಂಬ ಹೆಮ್ಮೆ ನಮಗಿದೆ. ಸನ್ಮಾನ್ಯರ ನಿಧನದಿಂದಾಗಿ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ, ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ  ನೋವನ್ನು ಬರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಸಚಿವರು ತಮ್ಮ ಶೋಕ ಸಂತಾಪದಲ್ಲಿ ತಿಳಿಸಿದ್ದಾರೆ.

ಇನ್ನೊಂದೆಡೆ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರರವರು ಎಸ್‌ಎಂಕೆ ಅಗಲಿಕೆ ಬಗ್ಗೆ ಸಂತಾಪ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಲೋಕಸಭೆ, ರಾಜ್ಯಸಭೆ, ರಾಜ್ಯ ವಿಧಾನಸಭೆ, ರಾಜ್ಯ ವಿಧಾನ ಪರಿಷತ್ ಹೀಗೆ ನಾಲ್ಕೂ ಸದನಗಳ ಸದಸ್ಯರಾಗಿದ್ದ ಹೆಗ್ಗಳಿಕೆ ಹೊಂದಿದ್ದ ಎಸ್‌ಎಂ ಕೃಷ್ಣರವರ ಬದುಕು ಎಲ್ಲರಿಗೂ ಸ್ಫೂರ್ತಿ ಆಗಿದೆ. ಹಿರಿಯ ಮುತ್ಸದ್ದಿ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದು, ಇಡೀ ನಾಡಿಗೆ ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಬಂಧು ಬಳಗಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. 

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

16 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

16 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

16 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

19 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

22 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

23 hours ago