ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು

RIPPONPETE ; ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು. ಚಿನ್ನಕ್ಕಿಂತ ಅನ್ನವೇ ಶ್ರೇಷ್ಟ. ಪ್ರತಿಯೊಬ್ಬರಿಗೂ ಭೂಮಿ, ನೀರು, ಅನ್ನ, ವಾಯು ಇವು ಅವಶ್ಯಕವಾಗಿ ಬೇಕು. ನಿಸರ್ಗವು ನಮಗೆ ಉಚಿತವಾಗಿ ದೊರಕಿಸಿಕೊಡುತ್ತದೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು.

ಕಗ್ಗಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವಯರು ನಮ್ಮೂರು ನಮ್ಮ ಕೆರೆ ಯೋಜನೆಯಡಿ ತಳಲೆ ತಲೆಕಟ್ಟು ಕೆರೆಯ  ಹಸ್ತಾಂತರ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಆನ್ನಕೊಡುವ ರೈತ ಶ್ರೇಷ್ಟ ಅದರಂತೆ ಜ್ಞಾನಾಮೃತ ನೀಡುವ ಶ್ರೀಗುರುಶ್ರೇಷ್ಟ.ಹಾಗಾಗಿ ಜ್ಞಾನ ಮತ್ತು ಅನ್ನ ಬಹಳ ಶ್ರೇಷ್ಟ ಇಂದು ರೈತ ದಿನ ಎಷ್ಟು ವಿದ್ಯೆಗಳನ್ನು ಕಲಿತರು ಹೊಟ್ಟೆ ತುಂಬಿಸುವ ವಿದ್ಯ ಕೃಷಿ ಸಂಪ್ರದಾಯಕ ಕೃಷಿಯನ್ನು  ಅವಲಂಬಿಸಿದಂತ ನಾಡು ನಮ್ಮ ಭಾರತ ದೇಶವಾಗಿದೆ ಎಂದರು.

ಪ್ರಕೃತಿಯು ಹಚ್ಚ ಹಸಿರಾಗಿರಬೇಕಾದರೆ ಶುದ್ದಗಾಳಿ, ಶುದ್ದವಾದ ನೀರು ಅವಶ್ಯ. ಹಿಂದಿನ ನಮ್ಮ ಪೂರ್ವಜರು ಅಲ್ಲಲ್ಲಿ ಕೆರೆಕಟ್ಟೆ ನಿರ್ಮಾಣ ಮಾಡಿ ನಾಡನ್ನು ಸಂವೃದ್ದಗೊಳಿಸಿದ್ದರೆಂದು ಹೇಳಿದರು.

ತೀರ್ಥಹಳ್ಳಿ ಕ್ಷೇತ್ರದ ಶಾಸಕ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭಾಗವಹಿಸಿ ಮಾತನಾಡಿ, ಸರ್ಕಾರ ಮಾಡದ ಕಾರ್ಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯವರು ನಮ್ಮೂರು ನಮ್ಮ ಕೆರೆ ಎಂಬ ಹೆಸರಿನಲ್ಲಿ ಗ್ರಾಮೀಣ ಭಾಗದಲ್ಲಿನ ಹಲವು ಕೆರೆಗಳು ಹೂಳು ತುಂಬಿ ಮುಚ್ಚಿ ಹೋಗಿದ್ದು ಅದಕ್ಕೆ ಕಾಯಕಲ್ಪ ನೀಡುವ ಮೂಲಕ ಹೊಳು ತಗೆಯುವುದರೊಂದಿಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ ಸುತ್ತಮುತ್ತಲಿನ ಕೆರೆಅಚ್ಚುಕಟ್ಟು ಜಮೀನಿಗೆ ನೀರುಣಿಸುವ ಕಾಯಕದಲ್ಲಿ ತೊಡಗಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಗರ ವಿಧಾನಸಭಾ ಕ್ಷೇತ್ರ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಮುಂದಾಲೋಚನೆ ಮತ್ತು ಅಭಿವೃದ್ದಿಯ ಕಾರ್ಯಕ್ರಮಗಳು ಜನಮಾನಸದಲ್ಲಿ ಉಳಿಯುವಂತೆ ಮಾಡಿರುವುದರ ಬಗ್ಗೆ ಪ್ರಶಂಸೆಯ ಮಾತನಾಡಿ, ಮದ್ಯವರ್ಜನ ಶಿಬಿರ ಸ್ವಸಹಾಯ ಸಂಘ ಹೀಗೆ ದುಡಿಮೆಯಲ್ಲಿನ ಹಣವನ್ನು ಉಳಿತಾಯ ಮಾಡಿಕೊಳ್ಳುವ ಮೂಲಕ ನಿರ್ಗತಿಕರ ಶ್ರೆಯೋಬಿವೃದ್ದಿಗೆ ಹಗಲಿರುಳು ಶ್ರಮಿಸುವ ಕರುಣಾಮಯಿ ದೇವರು ಎಂದು ಹೆಗ್ಗಡೆಯವರನ್ನು ವರ್ಣಿಸಿದರು. ಅವರ ಮಾರ್ಗದರ್ಶನ ಮತ್ತು ಇಂತಹ ಜನಹಿತ ಕಾರ್ಯಗಳು ನಮಗೆ ಸ್ಪೂರ್ತಿಯಾಗಿವೆ ಎಂದರು.

ಕೆರೆ ಸಮಿತಿ ಅಧ್ಯಕ್ಷ ನಿಂಗಪ್ಪ, ಹೊಸನಗರ ತಾಲ್ಲೂಕು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಪ್ರದೀಪ, ಇಂಜಿನಿಯರ್ ಗಣಪತಿ, ನಾಗರತ್ನ ದೇವರಾಜ್, ಕೆರೆ ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳು ಮತ್ತು ಗ್ರಾಮ ಪಂಚಾಯ್ತಿ ಸದಸ್ಯರು ಇನ್ನಿತರ ಹಲವರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 hour ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

5 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

7 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

8 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

17 hours ago