ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ –
ರಿಪ್ಪನ್‌ಪೇಟೆ : ಭರತನಾಟ್ಯವನ್ನು ಕೇಂದ್ರವಾಗಿಟ್ಟುಕೊಂಡು ಶಾಸ್ತ್ರೀಯ ನೃತ್ಯದ ಎಲ್ಲ ಪ್ರಾಕಾರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ನೃತ್ಯ ನಿಕೇತನ ಕೊಡವೂರು ಸಂಸ್ಥೆಯ ನೃತ್ಯ ರೂಪಕ ಕಾರ್ಯಕ್ರಮವನ್ನು ನಾಳೆ ಶುಕ್ರವಾರ (27-13-2024) ರಂದು ಪಟ್ಟಣದಲ್ಲಿ ಆಯೋಜಿಸಲಾಗಿದೆ.
ಪಟ್ಟಣದ ಜಯಶ್ರೀ ಮತ್ತು ಶ್ರೀನಿವಾಸ್ ಆಚಾರ್ ದಂಪತಿಗಳು ದುರ್ಗಾಂಬಿಕ ಸಾಮಿಲ್ ಆವರಣದಲ್ಲಿ ಹಮ್ಮಿಕೊಂಡಿರುವ ಪಂಚಮಾ ನವ ಚಂಡಿಕಾ ಹೋಮ ಧಾರ್ಮಿಕ ಕಾರ್ಯದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಶುಕ್ರವಾರ ಮಧ್ಯಾಹ್ನ 12-30ಕ್ಕೆ ಪಂಚಮಾ ನವ ಚಂಡಿಕಾ ಹೋಮ, ಸಂಜೆ 6 ಗಂಟೆಗೆ ಸರೋಜಮ್ಮ ಎಸ್ ಎಸ್ ಹೊನ್ನಪ್ಪಚಾರ್ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು 07 ಗಂಟೆಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ರಾತ್ರಿ 08 ಗಂಟೆಗೆ ಕಾಂತಾರ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ ಉಡುಪೊ ಕೊಡವೂರಿನ ನೃತ್ಯ ನಿಕೇತನ ತಂಡದವರಿಂದ ನೃತ್ಯರೂಪಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ದುರ್ಗಾಂಬಿಕಾ ಸಾಮಿಲ್ ಮಾಲೀಕರಾದ ಶ್ರೀನಿವಾಸ್ ಆಚಾರ್ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್