Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ
ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಅವುಕ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿರುವ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಕಮ್ಮಚ್ಚಿ ನಿವಾಸಿ ರೇಖಾ(36) ಎಂಬುವವರ ಮೃತದೇಹ ಪತ್ತೆಯಾಗಿದೆ.
ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ರೇಖಾ ಬಗ್ಗೆ ಕುಟುಂಬಸ್ಥರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ , ಸಂಬಂಧಿಕರು ಹಾಗೂ ಸ್ನೇಹಿತರೆಲ್ಲಾ ವಿಚಾರಿಸಿದ್ದರು ಆದರೆ ಇಂದು ಬೆಳಿಗ್ಗೆಯ ಮಹಿಳೆಯ ಮೃತದೇಹ ಅವುಕ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ತೋಟದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಹಲವಾರು ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡಿದ್ದ ರೇಖಾ ತೀವ್ರ ಮದ್ಯವಸನಿಯಾಗಿದ್ದರು ಎನ್ನಲಾಗುತಿದ್ದು ಮಾನಸಿಕವಾಗಿ ಜರ್ಜರಿತರಾಗಿದ್ದರು.
ಸ್ಥಳಕ್ಕೆ ಗರ್ತಿಕೆರೆ ಗ್ರಾಪಂ ಅಧ್ಯಕ್ಷ ಸಚಿನ್ ಗೌಡ ,ಸದಸ್ಯ ಲಿಂಗರಾಜ್ ಭೇಟಿ ನೀಡಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸರು ಸ್ಥಳಕ್ಕೆ ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.