6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ
6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;- ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ೬.೧೨ ಕೋಟಿ ರೂಪಾಯಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಾಸಕ ಹಾಗೂ ರಾಜ್ಯ ಅರಣ್ಯ ಮತ್ತು ಕೈಗಾರಿಕಾಭಿವೃಧ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಘೋಷಿಸಿದಂತೆ…