ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು | Crime News
ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ. ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು.ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆ. ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು…