
ರೈಲಿಗೆ ಸಿಲುಕಿ ಮಹಿಳೆ ಸಾವು
ರೈಲಿಗೆ ಸಿಲುಕಿ ಮಹಿಳೆ ಸಾವು ರೈಲಿಗೆ ಸಿಲುಕಿ ಮಹಿಳೆಯೊಬ್ಬರುಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬಿ.ಪಿ.ಕಮಲಾ (35) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಕಮಲಾ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.