 
        
            ಚಿಕ್ಕ ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು
ಚಿಕ್ಕ ಜೇನಿ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ, ಜನ್ನಂಗಿ , ಗ್ರಾಮದ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ನೂರಾರು ಲೋಡ್ ಅಕ್ರಮ ಮರಳು ಶೇಖರಿಸಿದ್ದರೂ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ. ಶಾಂತಪುರ ಸೇತುವೆಯಿಂದ ಪ್ರಾರಂಭವಾಗಿ ಹತ್ತಾರು ಸ್ಥಳಗಳಲ್ಲಿ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು…
 
                         
                         
                         
                         
                         
                         
                         
                         
                         
                         
         
         
         
         
         
        