ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ | Crime News
ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ. ಬುಧವಾರ ಶಿವಮೊಗ್ಗದ ವಿದ್ಯಾನಗರದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದಲ್ಲಿರುವ ಭದ್ರಾ ಹಿನ್ನೀರಿನ ಬಳಿ ಬಂದಿದ್ದಾರೆ, ಈ ವೇಳೆ ನಾಲ್ವರಲ್ಲಿ ಮೂವರು ತೆಪ್ಪದಲ್ಲಿ ತೆರಳಿದ್ದಾರೆ ಓರ್ವ ಮಾತ್ರ ದಡದಲ್ಲಿ ನಿಂತಿದ್ದ ಎನ್ನಲಾಗಿದೆ…


