ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ |112 police saved man life
ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಸಾಹಸದಿಂದಾಗಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ಜೀವ ಉಳಿದ ಘಟನೆ ಭಾನುವಾರ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ನಗರದ ಕೊಮ್ಮನಾಳು ಗ್ರಾಮದಲ್ಲಿ ನಡೆದಿದೆ. ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯೊಂದರ ಬಳಿ ಭಾರೀ ಮಳೆಯಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿತ್ತು. ಗುಡ್ಡದ ಮೇಲೆ ಬಿದ್ದ ಮಳೆಯ ನೀರು ರಸ್ತೆ ಮೇಲೆ ಹರಿದು ತಗ್ಗು ಪ್ರದೇಶಗಳಿಗೆ ನುಗ್ಗಿತ್ತು. ಈ ವೇಳೆ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಕೆಲಸ…