POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಆಗುಂಬೆ ಘಾಟ್ ನಲ್ಲಿ ನಡೆದ ಘಟನೆ

Screenshot 20250126 210656 Chrome.jpg

ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಆಗುಂಬೆ ಘಾಟ್ ನಲ್ಲಿ ನಡೆದ ಘಟನೆ

ತೀರ್ಥಹಳ್ಳಿ: ಪರ್ಕಳದಿಂದ ತೀರ್ಥಹಳ್ಳಿ ಮಾರ್ಗವಾಗಿ ಕೊಪ್ಪಕ್ಕೆ ಬರುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ನಲ್ಲೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ.

ಬಸ್ ನಲ್ಲಿ ಆಗಮಿಸುತ್ತಿದ್ದ ಕೊಪ್ಪದ ಹರೀಶ್ ಬಳ್ಳಾಲ್ ಎನ್ನುವವರಿಗೆ ತೀವ್ರ ಹೃದಯಘಾತ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಬಸ್ ಡ್ರೈವರ್ ಪ್ರಾಥಮಿಕ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಹರೀಶ್ ಪ್ರಾಣ ಬಿಟ್ಟಿದ್ದಾರೆ.

ಆಗುಂಬೆ ವೈದ್ಯಾಧಿಕಾರಿಯಾದ ಅನಿಕೇತನ್ ಪರೀಕ್ಷಿಸಿ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ.

ನಂತರ ಆಗುಂಬೆಯ ಲಯನ್ಸ್ ಕ್ಲಬ್ ಆಂಬುಲೆನ್ಸ್ ಗೆ ಬಳ್ಳಾಳ್ ಅವರ ಮೃತದೇಹವನ್ನು ಶಿಫ್ಟ್ ಮಾಡಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತೊಂದರೆ ಆಗದಂತೆ ಬಸ್ಸನ್ನು ಕಳಿಸಿ ಕೊಟ್ಟಿರುತ್ತಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.