ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ
ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು.
ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 17 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಸೇವೆಯ ಜೊತೆಗೆ ಕವಿತೆ, ಲೇಖನಗಳನ್ನು ಬರೆಯುವ ಹವ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಜೊತೆಗೆ ಪ್ರೇರಣಾ ಸ್ವಯಂ ಸೇವಾ ಸಂಘವನ್ನು ಮಾಡಿಕೊಂಡು ಶಾಲೆ ಹಾಗೂ ಪರಿಸರ ಕಾಳಜಿ ಕಾರ್ಯಕ್ರಮಗಳನ್ನು ಸದಸ್ಯರೊಂದಿಗೆ ನಿರ್ವಹಣೆ ಮಾಡುತ್ತಿದ್ದಾರೆ.
2022ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ, 2024ನೇ ಸಾಲಿನ ರಾಷ್ಟ್ರಕವಿ ಕುವೆಂಪು ಪ್ರಶಸ್ತಿಯನ್ನು ಪಡೆದಿರುತ್ತಾರೆ. ಇವರು ಸದಾಶಯ ಮತ್ತು ಭಾವತೇರು ಎನ್ನುವ ಎರಡು ಕವನ ಸಂಕಲನವನ್ನು ಪ್ರಕಟಿಸಿರುತ್ತಾರೆ. ಶಾಲೆಯ ಅಭಿವೃದ್ಧಿಯ ಜೊತೆಗೆ ಅನೇಕ ಸಮಾಜಮುಖಿ ಕಾರ್ಯವೈಖರಿಯನ್ನು ಮೆಚ್ಚಿ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇವರ ಜೊತೆಗೆ 17 ಪ್ರೌಢಶಾಲಾ ಶಿಕ್ಷಕರಿಗೆ ಮತ್ತು 20 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ವರ್ಷದ ರಾಜ್ಯ ಮಟ್ಟದ ಅನಿತಾಕೌಲ್ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇವರ ಈ ಸಾಧನೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್