ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ

ರಿಪ್ಪನ್ ಪೇಟೆ : ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಬೇಡಿಕೆಯಿದ್ದ MBBS ಮಹಿಳಾ ಮತ್ತು ಮಕ್ಕಳ ತಜ್ಞ ವೈದ್ಯರು ಇನ್ನೂ ಮುಂದೆ ಪ್ರತಿ ನಿತ್ಯ ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಲಭ್ಯವಿರುತ್ತಾರೆ.

ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಪ್ರತಿ ನಿತ್ಯ ಸಂಜೆ 4ರಿಂದ 9 ಗಂಟೆಯವರೆಗೆ ಪ್ರಖ್ಯಾತ ಮಹಿಳಾ ಮತ್ತು ಮಕ್ಕಳ ತಜ್ಞರಾದ ಡಾ.ಶೋಭಾ ದೇವಿ ಎನ್ ಟಿ MBBS ,DPH ರವರು ಲಭ್ಯವಿರುತ್ತಾರೆ. ಸಕ್ಕರೆ ಕಾಯಿಲೆ ಡಯಾಬಿಟಿಸ್, ಅಧಿಕ ರಕ್ತದೊತ್ತಡ ಮೈಗ್ರೀನ್ , ಥೈರಾಯ್ಡ್ ಸಮಸ್ಯೆ ಅನಿಯಮಿತ ಮುಟ್ಟು ಫಲವಂತಿಕೆಯ ಸಮಸ್ಯೆ ಮುಂತಾದ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಿದ್ದಾರೆ.

ಇನ್ನೂ ಆರೋಗ್ಯ ಕ್ಲಿನಿಕ್ ನಲ್ಲಿ ಹೈಟೆಕ್ ತಂತ್ರಜ್ಞಾನದ ಲ್ಯಾಬ್ ಲಭ್ಯವಿದ್ದು ಎಲ್ಲಾ ತರಹದ ಪರೀಕ್ಷೆಗಳು ತ್ವರಿತವಾಗಿ ನಡೆಯುತ್ತದೆ.ರಕ್ತ ಹಾಗೂ ಮೂತ್ರ ಪರೀಕ್ಷೆ, ಥೈರಾಯ್ಡ್, ಮದುಮೇಹ ಪರೀಕ್ಷೆಗಳು ಒಂದೇ ಸೂರಿನಡಿ ಲಭ್ಯವಿದೆ.

ಈ ಸಂಧರ್ಭದಲ್ಲಿ ಪೋಸ್ಟ್ ಮ್ಯಾನ್ ಸುದ್ದಿಯೊಂದಿಗೆ ಮಾತನಾಡಿದ ಡಾ.ಶೋಭಾ ದೇವಿ ಸಮಾಜದಲ್ಲಿನ ದುರ್ಬಲ ವರ್ಗದವರು ಮತ್ತು ಬಡವರ ಉತ್ತಮ ಆರೋಗ್ಯಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ವೃತ್ತಿಯನ್ನು ಆರಂಭಿಸಿದ್ದೇನೆ ಎಂದು ಹೇಳಿದರು.

ವೈದ್ಯಕೀಯ ವೃತ್ತಿಯು ಸಮಾಜದಲ್ಲಿ ಗೌರವಾನ್ವಿತ ವೃತ್ತಿಯಾಗಿದ್ದು, ಸಮಾಜದಲ್ಲಿನ ನಾಗರಿಕರಿಗೆ ಉತ್ತಮ ಆರೋಗ್ಯದ ಅರಿವನ್ನು ಮೂಡಿಸಲು ಈ ವೃತ್ತಿ ಸಹಕಾರಿಯಾಗಿದೆ , ನನಗೆ ವಿದೇಶಗಳಲ್ಲಿ ಹಾಗೂ ನಗರ ಭಾಗಗಳಲ್ಲಿ ವೈದ್ಯಕೀಯ ಸೇವೆಯನ್ನು ಸಲ್ಲಿಸಲು ದೊಡ್ಡ ದೊಡ್ಡ ನರ್ಸಿಂಗ್ ಹೋಂ ಗಳ ಮುಖ್ಯಸ್ಥರು ಲಕ್ಷಾಂತರ ಸಂಬಳದ ಅವಕಾಶವನ್ನು ನೀಡುತ್ತೇನೆ ಎಂದರು ಸಹ ನನಗೆ ಗ್ರಾಮೀಣ ಜನತೆಯ ಸೇವೆ ಮಾಡಬೇಕು ಮಹದಾಸೆಯಿಂದ ಈ ಭಾಗವನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

19 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

19 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

19 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago