January 11, 2026

ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ

ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದ ಬಳಿಯಲ್ಲಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿದ್ದಾರೆ.

ರಿಪ್ಪನ್‌ಪೇಟೆ ನಿವಾಸಿಗಳಾದ ವಿಜಯ್ ಕುಮಾರ್ , ವಿನಾಯಕ ಮತ್ತು ಸುಜಿತ್ ಬಂಧಿತ ಆರೋಪಿಯಾಗಿದ್ದಾರೆ.

ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳವಾರ ಸಾಗರ ರಸ್ತೆಯಲ್ಲಿ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿಯನ್ನಾಧರಿಸಿ ಸ್ಥಳಕ್ಕೆ ತೆರಳಿ ಮೂವರನ್ನು ವಿಚಾರಿಸಿ
ಕೂಡಲೇ ವೈದ್ಯಕೀಯ ತಪಾಸಣೆಗೆ ಮೆಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು, ಮೂವರು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈದಕೀಯ ಪರೀಕ್ಷೆಯಿಂದ ದೃಡಪಟ್ಟಿರುವುದರಿಂದ ಮೂವರ ವಿರುದ್ಧ ಮಾದಕ ದ್ರವ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ ,ರಾಮಚಂದ್ರಪ್ಪ, ಪರಮೇಶ್ವರಪ್ಪ ಹಾಗೂ‌ ಮಧುಸೂಧನ್ ಇದ್ದರು.

About The Author

Leave a Reply

Your email address will not be published. Required fields are marked *

Exit mobile version