ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ವಿನಾಯಕ ನಗರದ ಬಳಿಯಲ್ಲಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಪಿಎಸ್ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿದ್ದಾರೆ.
ರಿಪ್ಪನ್ಪೇಟೆ ನಿವಾಸಿಗಳಾದ ವಿಜಯ್ ಕುಮಾರ್ , ವಿನಾಯಕ ಮತ್ತು ಸುಜಿತ್ ಬಂಧಿತ ಆರೋಪಿಯಾಗಿದ್ದಾರೆ.
ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ.
ಮಂಗಳವಾರ ಸಾಗರ ರಸ್ತೆಯಲ್ಲಿ ರಿಪ್ಪನ್ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿಯನ್ನಾಧರಿಸಿ ಸ್ಥಳಕ್ಕೆ ತೆರಳಿ ಮೂವರನ್ನು ವಿಚಾರಿಸಿ
ಕೂಡಲೇ ವೈದ್ಯಕೀಯ ತಪಾಸಣೆಗೆ ಮೆಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು, ಮೂವರು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈದಕೀಯ ಪರೀಕ್ಷೆಯಿಂದ ದೃಡಪಟ್ಟಿರುವುದರಿಂದ ಮೂವರ ವಿರುದ್ಧ ಮಾದಕ ದ್ರವ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಪಿಎಸ್ಐ ಪ್ರವೀಣ್ ಎಸ್ ಪಿ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ ,ರಾಮಚಂದ್ರಪ್ಪ, ಪರಮೇಶ್ವರಪ್ಪ ಹಾಗೂ ಮಧುಸೂಧನ್ ಇದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply