POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು

GridArt 20250131 150838390.jpg

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ನಗರದ ಯುವಕನೊಬ್ಬ ಹೊನ್ನಾಳಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ನಡೆದಿದೆ.

ವಿನಾಯಕ ನಗರದ ನಿವಾಸಿ ಜೀಶಾನ್ ( 22) ಮೃತಪಟ್ಟ ದುರ್ಧೈವಿಯಾಗಿದ್ದಾನೆ.

ಚನ್ನಗಿರಿ ಸಮೀಪದ ಬಸವಾಪಟ್ಟಣದಲ್ಲಿ ನಡೆಯುತ್ತಿದ್ದ ಇಸ್ತಿಮಾ ಧಾರ್ಮಿಕ ಕಾರ್ಯಕ್ರಮಕ್ಕೆ ಬಜಾಜ್ ಪಲ್ಸರ್ ಬೈಕ್ ನಲ್ಲಿ ತೆರಳುತಿದ್ದಾಗ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಪಘಾತದ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ವಿನಾಯಕ ನಗರ ನಿವಾಸಿ ಅಬ್ದುಲ್ ಮಜೀದ್ ರವರ ಪುತ್ರನಾದ ಜೀಶಾನ್ ಇಸ್ತಿಮಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತಿದ್ದಾಗ ಈ ದುರ್ಘಟನೆ ನಡೆದಿದೆ.

ಮೃತದೇಹವನ್ನು ಹೊನ್ನಾಳಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಕರೆದೊಯ್ಯಲಾಗಿದೆ.

ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.