ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ
ಶಿವಮೊಗ್ಗ : ಜ. 16: ‘ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ನಿಮಗೆ ಸಮಸ್ಯೆ, ಉಪಟಳ, ಕಿರಿಕಿರಿ ಉಂಟು ಮಾಡಿದರೆ ಕೂಡಲೇ 112 ಸಂಖ್ಯೆಯ ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಕರೆ ಮಾಡಿ ಮಾಹಿತಿ ನೀಡಿ. ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳೆಯರ ರಕ್ಷಣೆಗೆಂದೆ ಜಿಲ್ಲಾ ಪೊಲೀಸ್ ಇಲಾಖೆ ಅಸ್ತಿತ್ವಕ್ಕೆ ತಂದಿರುವ ‘ಚನ್ನಮ್ಮ ಪಡೆ’ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮಾಂತರ ಠಾಣೆ ಸಬ್ ಇನ್ಸ್’ಪೆಕ್ಟರ್ (ಪಿಎಸ್ಐ) ಸ್ವಪ್ನ ಅವರು ಮಹಿಳೆಯರಿಗೆ ತಿಳಿಸಿದ್ದಾರೆ.
ಶಿವಮೊಗ್ಗ ನಗರದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣ ಕಟ್ಟಡದಲ್ಲಿರುವ ವ್ಯಾಪಾರಿ ಮಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ, ಜ. 15 ರಂದು ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಸುರಕ್ಷತೆಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ ಸಾಮಾಜಿಕ ಜಾಲತಾಣ ನಿರ್ವಹಣೆ ವೇಳೆ, ಮಹಿಳೆಯರು ಸಾಕಷ್ಟು ಎಚ್ಚರಿಕೆವಹಿಸಬೇಕು. ಆನ್ ಲೈನ್ ನಲ್ಲಿ ಚಾಟಿಂಗ್ ಸೇರಿದಂತೆ ಜಾಲತಾಣಗಳ ಬಳಕೆ ವೇಳೆ ಜಾಗರೂಕರಾಗಿರಬೇಕು. ನಿಮ್ಮ ಖಾಸಗಿ ಮಾಹಿತಿ, ಫೋಟೋಗಳನ್ನು ಹಂಚಿಕೊಳ್ಳಬೇಡಿ. ಇವುಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಕಿವಿಮಾತು ಹೇಳಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…