ಆನಂದಪುರ : ಭಾರಿ ಪ್ರಮಾಣದ ಇಬ್ಬನಿ ಸುರಿಯುತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ 11 ಕೆ ವಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ನಡೆದಿದೆ.
ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡ ಜಖಂಗೊಂಡಿದೆ.
ಮಂಗಳವಾರ ಮುಂಜಾನೆ ಭಾರಿ ಪ್ರಮಾಣದ ಇಬ್ಬನಿ ಬೀಳುತ್ತಿದ್ದ ಕಾರಣ ಚಾಲಕ 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಕಾರಿನಲ್ಲಿ ಚಾಲಕನೊಬ್ಬನೆ ಇರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.