ಕಾರ್ ಮೆಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ ಮಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಶಿವಮೊಗ್ಗ:  ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹರಿತವಾದ ಆಯುಧದಿಂದ  ಚುಚ್ಚಿ  ಹೊಸಳ್ಳಿಯ ಕಾರ್ ಮೆಕ್ಯಾನಿಕ್‌ನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ.

ಜಿಕ್ರುಲ್ಲಾ (೨೮) ಎಂಬಾತನನ್ನು ಕೊಲೆಗೈದಿದ್ದ  ಮಿಳಘಟ್ಟದ ಶಹಬಾಜ್ ಶರೀಫ್ (೨೦) ಟೆಂಪೋ ಸ್ಟ್ಯಾಂಡ್ ಬಳಿಯ  ವಸೀಂ ಅಕ್ರಂ  ಅಲಿಯಾಸ್  ಉಂಗ್ಲಿ (೨೦),  ಬುದ್ಧನಗರದ ವಸೀಂ ಅಕ್ರಂ ಅಲಿಯಾಸ್  ಕಾಲಾ ವಸೀಂ (೨೦)   ಮತ್ತು  ಮುರಾದ್‌ನಗರದ ಫಯಾಜ್ ಉಲ್ಲಾ ರೆಹಮಾನ್ ಅಲಿಯಾಸ್ ರುಮಾನ್ (೨೩) ಶಿಕ್ಷೆ ವಿಧಿಸಿದೆ.

ಬುದ್ಧನಗರದಲ್ಲಿ ಕಾರ್ ಪಾರ್ಕಿಂಗ್ ಮಾಡುವ ವಿಚಾರವಾಗಿ ಗ್ಯಾಸ್ ಇಮ್ರಾನ್ ನೊಂದಿಗೆ ಜಗಳವಾಗಿತ್ತು ಹಾಗೂ ಈ ಹಿಂದೆ ಟ್ವಿಸ್ಟ್ ಇಮ್ರಾನ್‌ನೊಂದಿಗೂ ಗಲಾಟೆಯಾಗಿತ್ತು ಈ ದ್ವೇಷದ ಹಿನ್ನೆಲೆಯಲ್ಲಿ ೨೦೨೨ ರ ಮಾ. ೧೯ರಂದು  ರಾತ್ರಿ ಎನ್ ಟಿ ರಸ್ತೆ ಫಲಕ್ ಶಾದಿ ಮಹಲ್ ಪಕ್ಕ ರಸ್ತೆಯಲ್ಲಿ ಜಿಕ್ರುಲ್ಲಾ ತನ್ನ ಸ್ನೇಹಿತರೊಂದಿಗೆ ಮಾತನಾಡುತ್ತ ನಿಂತಿದ್ದಾಗ  ಈ ಮೇಲಿನ ಆರೋಪಿಗಳು ಹರಿತವಾದ ಆಯುಧದಿಂದ ಜಿಕ್ರುಲ್ಲಾ ನ ಮೈಕೈ ಗೆ ಚುಚ್ಚಿ, ತಲೆಗೆ  ಹೊಡೆದು ತೀವ್ರ ಸ್ವರೂಪದ ಮಾರಣಾಂತಿಕ ಹಲ್ಲೆ ಮಾಡಿದ್ದರು.

ಜಿಕ್ರುಲ್ಲಾನನ್ನು ಕೂಡಲೇ ಚಿಕಿತ್ಸೆಗೆಂದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮಾರನೆಯ ದಿನು ಮೃತಪಟ್ಟಿದ್ದನು.    ಮೃತನ ಸಹೋದರ ನೀಡಿದ ದೂರಿನ ಮೇರೆಗೆ    ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಆಗಿನ ತನಿಖಾಧಿಕಾರಿ ಸಿಪಿಐ ಅಂಜನ್‌ಕುಮಾರ್ ತನಿಖೆ ಪೂರೈಸಿ ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ  ಸರ್ಕಾರಿ ಅಭಿಯೋಜಕಿ ಪುಷ್ಪಾ ಪ್ರಕರಣದ ವಾದ ಮಂಡಿಸಿದ್ದರು. ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು,  ನ್ಯಾಯಾಧೀಶೆ  ಬಿ.ಪಲ್ಲವಿ  ಗುರುವಾರ  ನಾಲ್ಕೂ ಜನ ಆರೋಪಿತರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ ೩೦,೦೦೦ ದಂಡ ವಿಧಿಸಿ ಆದೇಶಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

5 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

6 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

6 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago