POSTMANNEWS

ನೈಜ ಸುದ್ದಿ ನೇರ ಬಿತ್ತರ..

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ  ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ ಸೆಳೆದು ಸುಮಾರು 25 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿದ್ದು, ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಸರಗಳ್ಳತನ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಮಹಿಳೆಯರು ಓಡಾಡುವುದೇ ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ನಾನು ಸೊರಬ ಬಂದು ಸುಮಾರು 20 ವರ್ಷವಾಯಿತು. ಈ ತರಹದ ಘಟನೆ ಕೇಳಿರಲಿಲ್ಲ. ಸಂಬಂಧಪಟ್ಟ ಇಲಾಖೆಯವರು ಕೂಡಲೇ ಕ್ರಮ ಕೈಗೊಳ್ಳಬೇಕು. ಸರಗಳ್ಳರನ್ನು ಸರೆಹಿಡಿದು, ಮಹಿಳೆಗೆ ಮಾಂಗಲ್ಯಸರವನ್ನು ಮರುಕಳಿಸಬೇಕು ಎಂದು ಲಕ್ಷ್ಮೀ ಬಾಯಿ ಅವರ ಸ್ನೇಹಿತೆ ಜ್ಯೋತಿ ಒತ್ತಾಯಿಸಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version