ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು.

ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫ ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ  ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ  ವಿದ್ಯಾರ್ಥಿ ಯುವ ಸಮೂಹ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ನೀಡಬೇಕು. ಕಠಿಣ ಪರಿಶ್ರಮ ಮತ್ತು ಅಧ್ಯಯನದ ಮೂಲಕ  ಉತ್ತಮ ಅಂಕಗಳನ್ನು ಗಳಿಸಿ, ಉನ್ನತ ಉದ್ಯೋಗವನ್ನು ಅಲಂಕರಿಸಿ ದೇಶದ ಅಭಿವೃದ್ಧಿಗೆ ಸಮಾಜದ ಮುಖ್ಯ ವಾಹಿನಿಗೆ ಬಂದಾಗ ಮಾತ್ರ  ವಿದ್ಯಾರ್ಥಿಗಳು ಪಡೆದುಕೊಂಡ ಶಿಕ್ಷಣಕ್ಕೆ ಮಹತ್ವ ಬಂದಂತಾಗುತ್ತದೆ ಯಾವುದೇ ವಿದ್ಯಾರ್ಥಿ ವ್ಯಾಸಂಗದಿಂದ ವಂಚಿತರಾಗದಂತೆಉಪನ್ಯಾಸಕ ವೃಂದ ಗಮನಹರಿಸಿ ಅವರನ್ನು ಕಾಲೇಜ್‌ಗೆ ಕರೆತರುವ ಕೆಲಸ ಮಾಡುವಂತೆ ತಿಳಿಸಿದರು.

ಇಂದಿನ ಯುವ ವಿದ್ಯಾರ್ಥಿಗಳು ಮೂಡನಂಬಿಕೆಯಿಂದ ಮುಗ್ದ ಜನರನ್ನು ವಂಚಿಸುವವರು ಹೆಚ್ಚಾಗಿದ್ದು ಅವರುಗಳಿಗೆ  ಅವಕಾಶ ನೀಡದೆ ಸ್ವಚ್ಚತೆಯಕಡೆ ಹೆಚ್ಚು ಒತ್ತು ನೀಡಬೇಕು ಎನ್.ಎಸ್.ಎಸ್.ಶಿಬಿರಗಳ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದ ಅವರು ವಿದ್ಯಾರ್ಥಿಗಳು ಗುರು ಹಿರಿಯರನ್ನುಗೌರವದಿಂದ ಕಾಣುವಂತೆ ಸಲಹೆ ನೀಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾಳಿಯ ಪ್ರಾಚಾರ್ಯ  ಪ್ರೊ. ಬಿ. ಜಿ. ಧನಂಜಯ ಮಾತನಾಡಿ ಇಂದಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸೌಲಭ್ಯಗಳು ದೊರಕುತ್ತಿದೆ. ಪಾಠ ಪ್ರವಚನಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳುವುದರ ಜೊತೆಗೆ ಪದವಿಯ ನಂತರ ಉದ್ಯೋಗ ಅವಕಾಶಗಳನ್ನು ಪಡೆಯುವುದರ ಸಲುವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಪದವಿ ಶಿಕ್ಷಣದಲ್ಲಿ ಅರಿವನ್ನು ಮೂಡಿಸಿಕೊಳ್ಳುವುದರ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸಾಗಿ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳ   ವಿವಿಧ ಉದ್ಯೋಗಗಳಲ್ಲಿ  ಉದ್ಯೋಗಿಗಳಾಗಿ ಅವಕಾಶವನ್ನು ಪಡೆದು ಕೊಂಡಾಗ ಮಾತ್ರ ವಿದ್ಯಾರ್ಥಿಗಳು ಪಡೆದುಕೊಂಡ ಶಿಕ್ಷಣಕ್ಕೆ  ಗೌರವ ದೊರಕಿದಂತಾಗುತ್ತದೆ, ಶಿಕ್ಷಣ ಕ್ಷೇತ್ರದಲ್ಲಿ ಯಶಸ್ವಿಯಾಗಲು ಕಾರಣ ಭೂತರಾದ ಉಪನ್ಯಾಸಕ ವರ್ಗ ಹಾಗೂ ಪೋಷಕರಿಗೆ ಸಂತಸವಾಗುತ್ತದೆ, ಆದಿಸೆಯಲ್ಲಿ  ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಕಾಲೇಜ್ ಪ್ರಾಚಾರ್ಯ ಡಾ. ಹೆಚ್ ಎಸ್  ವಿರೂಪಾಕ್ಷಪ್ಪ ಸಮಾರೋಪ ಸಮಾರಂಭದಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸಿಡಿಸಿ ಉಪಾಧ್ಯಕ್ಷರಾದ ಹಾಲಸ್ವಾಮಿ ಗೌಡ,,ಗ್ರಾಮ ಪಂಚಾಯ್ತಿ ಅಧ್ಯಕ್ಷೆ  ಧನಲಕ್ಷ್ಮಿ,ಉಪಾಧ್ಯಕ್ಷ ಸುದೀಂದ್ರಪೂಜಾರಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಪಿಯೂಸ್ ರೋಡ್ರಿಗಸ್, ಮಂಜುನಾಥ್ ಕಾಮತ್ ಹರ್ಷ ರಮೇಶ್ ಫ್ಯಾನ್ಸಿ,ಶ್ರೀನಿವಾಸ್ ಆಚಾರ್, ವಿಜಯೇಂದ್ರ, ರಾಘು, ಯೋಗೀಶ್ ಬೆಳ್ಳೂರು, ಅನಿಷಾ ಖಾದರ್, ಕಾಲೇಜಿನ ವಿವಿಧ  ಘಟಕಗಳ ಅಧಿಕಾರಿಗಳಾದ  ಪ್ರೊ. ರಾಜು. ಆರ್ ಕೆ , ಡಾ. ವಿದ್ಯಾ ಟೀ ಪವರ್. ಡಾ. ರವೀಶ್, ಡಾ. ಕುಮಾರ್, ರಾಜು ಬಿ.ಎಲ್  ನಯನ, ಡಾ. ರಜನಿ ಕಾಂತ್, ಹರ್ಷಕುಮಾರ್ ಕೆ. ಡಾ. ಸೌಮ್ಯ ಜಿ. ವಿದ್ಯಾರ್ಥಿ ಪ್ರತಿನಿಧಿಗಳಾದ ಕುಮಾರಿ ಸಿಂಚನ, ಅಕ್ಷಯ್ ಕೆ.ಜಿ, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಇನ್ನಿತರರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

3 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

5 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

22 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

22 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

24 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago