ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ

ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಹಲವಾರು ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದ ಆನೆಗಳ ಹಿಂಡನ್ನು ಅರಣ್ಯ ಇಲಾಖೆಯ ಕಾರ್ಯಾಚರಣೆ ನಡೆಸಿ ಓಡಿಸುವ ಸಂಧರ್ಭದಲ್ಲಿ ಸೂಡೂರಿನಲ್ಲಿ ರಸ್ತೆ ಮಧ್ಯೆ ಆನೆಗಳು ಪುಂಡಾಟ ನಡೆಸಿದ ಹಿನ್ನೆಲೆಯಲ್ಲಿ ಕೆಲ ಕಾಲ ಶಿವಮೊಗ್ಗ-ರಿಪ್ಪನ್ ಪೇಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದ ಘಟನೆ ನಡೆದಿದೆ.

ಮಲೆನಾಡಿನ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡಿನ ಉಪಟಳದಿಂದಾಗಿ ರೈತಾಪಿ ವರ್ಗ ಮತ್ತು ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಜೀವ ಭಯದಲ್ಲಿ ಓಡಾಡುವಂತಾಗಿದ್ದು ಇತ್ತೀಚೆಗೆ ಓರ್ವನ ಬಲಿ ಸಹ ಪಡೆದ ಹಿನ್ನೆಲೆಯಿಂದಾಗಿ ಅರಣ್ಯ ಇಲಾಖೆಯವರು ಕಾಡಾನೆಗಳ ಹಿಂಡನ್ನು ಸ್ಥಳಾಂತರಿಸಲು ಶತಾಯಗತಾಯ ಪ್ರಯತ್ನದೊಂದಿಗೆ ಪಣತೊಟ್ಟು ಕಾಡಾನೆಗಳ ಹಿಂಡಿಗೆ ಭಯ ಹುಟ್ಟಿಸುತ್ತಾ ಓಡಿಸಿಕೊಂಡು ದಾಟಿಸುವ ಪ್ರಯತ್ನದಿಂದಾಗಿ ಇಂದು ಶಿವಮೊಗ್ಗ-ರಿಪ್ಪನ್‌ಪೇಟೆ ಮಾರ್ಗದ ಸೂಡೂರು ಬಳಿ ಕೆಲಕಾಲ ವಾಹನ ಸಂಚಾರ ನಿಷೇಧಿಸಿದ್ದು ಕೆಲ ಸಮಯ ಸಂಚಾರ ಅಸ್ತವ್ಯಸ್ತವಾಗಿತ್ತು.

ಕಳೆದೊಂದು ವಾರದ ಹಿಂದೆ ಆಲವಳ್ಳಿ ಗ್ರಾಮದ ಮಜರೆ ಕಮದೂರು ಬಳಿ ಅಡಿಕೆ, ಬಾಳೆ ತೋಟಕ್ಕೆ ನುಗ್ಗಿ ಬೆಳೆ ನಾಶಗೊಳಿಸಿರುವುದು ಹಾಗೂ ಹಾರೋಹಿತ್ತಲು, ಬಸವಾಪುರ, ಬಟಾಣಿಜಡ್ಡು, ತುಪ್ಪೂರು, ಸೂಡೂರು, ಗಿಳಾಲಗುಂಡಿ, ಕೋಣೆಹೊಸೂರು, ತಂಗಳವಾಡಿ ಸೇರಿದಂತೆ ಹೀಗೆ ಹಲವು ಕಡೆಯಲ್ಲಿ ಕಾಡಾನೆಗಳ ಗುಂಪು ಕಾಣಿಸಿಕೊಂಡು ರೈತರ ಭತ್ತ, ಅಡಿಕೆ, ಬಾಳೆ ಬೆಳೆ ಧ್ವಂಸಗೊಳಿಸಿತ್ತು .

ಈ ಹಿನ್ನೆಲೆಯಲ್ಲಿ ದಾಳಿಗೊಳಗಾದ ತೋಟಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ರೈತರಿಗೆ ಸಾಂತ್ವಾನ ಹೇಳಿ ವೈಯುಕ್ತಿಕ ಧನ ಸಹಾಯ ಮಾಡುವ ಮೂಲಕ ಕೂಡಲೇ ಆನೆಗಳನ್ನು ಓಡಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಶುಕ್ರವಾರ ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವದಲ್ಲಿ ಶಿವಮೊಗ್ಗದ ಸಿಸಿಎಫ್ ಕಛೇರಿ ಎದುರು ನೂರಾರು ರೈತ ಮುಖಂಡರೊಂದಿಗೆ ಪ್ರತಿಭಟನೆ ಸಹ ನಡೆಸುವ ಮೂಲಕ ಆನೆಗಳನ್ನು ಕೂಡಲೇ ಸ್ಥಳಾಂತರ ಮಾಡುವಂತೆ ಆಗ್ರಹಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪ ಮತ್ತು ಚೋರಡಿ ಆಯನೂರು, ಸಿರಿಗೆರೆ ವಲಯ ವ್ಯಾಪ್ತಿಯ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗ ಆನೆಗಳ ಜಾಡು ಹಿಡಿದು ಪಟಾಕಿ ಶಬ್ದ ಮಾಡಿ ಓಡಿಸುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದು ಸೂಡೂರು ಅವಣಿಗೆ ಕ್ರಾಸ್ ಹತ್ತಿರ ಬರುತ್ತಿದ್ದಂತೆ ಪುನಃ ಕಾಡಿನೊಳಗೆ ಹಿಂತಿರುಗಿ ಓಡಿ ವಾಪಾಸ್ಸಾಗಿರುತ್ತವೆಂದು ಹೇಳಲಾಗಿದೆ.

ಒಟ್ಟಾರೆಯಾಗಿ ಮಲೆನಾಡಿನ ವ್ಯಾಪ್ತಿಯಲ್ಲಿ ರೈತಾಪಿ ವರ್ಗ ಕಾಡಾನೆಗಳ ಉಪಟಳಕ್ಕೆ ಹೈರಾಣಾಗಿದ್ದು ಇಲಾಖೆಯವರಿಗೆ ಹಿಡಿಶಾಪ ಹಾಕುತ್ತಾ ನಮಗೆ ಜೀವನ ನಡೆಸಲು ರಕ್ಷಣೆ ಮಾಡಿಕೊಡಿ ಎನ್ನುವ ಹಂತಕ್ಕೆ ತಲುಪಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 hour ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

17 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

17 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

18 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

23 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago