ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ

ಪರಿಸರ ಹೋರಾಟಗಾರ ಗಿರೀಶ್ ಆಚಾರ್ ರವರಿಗೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿ

ಬೆಂಗಳೂರಿನಲ್ಲಿ ನ್ಯಾಷನಲ್ ಪತ್ರಿಕೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ 2025 ಎಂಬ ಹೆಸರಿನ ಪ್ರಶಸ್ತಿಯನ್ನು ಪರಿಸರ ಹೋರಾಟಗಾರ , ಮಲೆನಾಡಿನ ಬುದ್ದ ಖ್ಯಾತಿಯ ಗಿರೀಶ್ ಆಚಾರ್ ರವರಿಗೆ ಲಭಿಸಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸವಾಲು ಮತ್ತು ಹಲವಾರು ಅಡೆತಡೆಗಳ ಹೊರತಾಗಿಯೂ ತಮ್ಮ ಪರಿಸರ ಉಳಿಸುವ ಹೋರಾಟ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಸಾಧನೆಗೈದ ಹೊಸನಗರ ತಾಲೂಕಿನ ಪುಟ್ಟ ಗ್ರಾಮ ಬ್ರಹ್ಮೇಶ್ವರದ ಗಿರೀಶ್ ಆಚಾರ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬ್ರಹ್ಮೇಶ್ವರ ಗ್ರಾಮದ ದಂಪತಿಗಳ ಸರೋಜಮ್ಮ ದಿ. ಚಂದ್ರ ಆಚಾರ್ ರವರ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಕುಟುಂಬದಲ್ಲಿ ಜನಿಸಿದ ಗಿರೀಶ್ ಆಚಾರ್  ಓದಿದ್ದು ಕೇವಲ 9 ನೇ ತರಗತಿ ಆದರು ಇಂಗ್ಲಿಷ್ ಸರಳವಾಗಿ ಓದಿ ಬರೆಯಬಲ್ಲರು ಹಾಗೆ ಸಂವಿಧಾನ ಓದಿ ತಿಳಿದುಕೊಂಡು ಒಂದಿಷ್ಟು ಅರ್ಥ ಮಾಡಿಕೊಂಡ ಆಚಾರ್ ಅವರು ಜೀವನ ಉಪಯೋಗಕ್ಕೆ ಡ್ರೈವರ್ ದುಡಿಯುತಿದ್ದಾರೆ.

ಧರ್ಮಪತ್ನಿ ನಾಗರತ್ನ (ಟೈಲರ್) ಹಿರಿಯ ಮಗ ಅಖಿಲೇಶ್ ಆಚಾರ್ (ಖಾಸಗಿ ಕಂಪನಿ ಕೆಲಸ) ಎರಡನೇ ಮಗ ಭರತ್ ಆಚಾರ್ (ಕ್ಯಾಬ್ ಡ್ರೈವರ್) ದೊಂದಿಗೆ ಬದುಕು ಕಟ್ಟಿಕೊಂಡ ಆಚಾರ್ ರವರು ಇಂದಿಗೂ ಸಂಘ ಸಂಸ್ಥೆಯಲ್ಲಿ ಸಾಲ ಮಾಡಿಕೊಂಡು ಹೋರಾಟ ಮಾಡುತ್ತಿರುವ ಸಾಮಾನ್ಯ ವ್ಯಕ್ತಿ ಹಾಗೂ ಅಸಾಮಾನ್ಯ ವ್ಯಕ್ತಿತ್ವದ ಗಿರೀಶ್ ಆಚಾರ್ ಪರಿಸರ ಉಳಿಸುವಲ್ಲಿ ತಮ್ಮದೇ ಆದ ಹೋರಾಟ ನಡೆಸಿ ಗೆಲುವು ಸಾಧಿಸಿದ್ದಾರೆ.

ಆಚಾರ್ ಅವರ ಪರಿಸರ ಪ್ರೇಮ ಹೋರಾಟದ ದಾರಿ ಕೆಲವು ಒಂದಿಷ್ಟು ಅರಣ್ಯ ಕಬಳಿಕೆ ಚಟುವಟಿಕೆ ಮಾಡುವ ಮಂದಿಗೆ ನಾನಾ ಕಾರಣಗಳಿಂದ ಇಷ್ಟ ಆಗದೇ ಇರಬಹುದು ಆದರೆ ಬಡವರು ರೈತರ ವಿರೋದಿಯಲ್ಲ ಅವರ ಹೋರಾಟ ಮುಂದಿನ ಪೀಳಿಗೆ ಬಗ್ಗೆ ಯೋಚಿಸಿ ಅರಣ್ಯ ಉಳಿಸುವ ಆಲೋಚನೆಯೇ ಹೊರತು ಯಾರ ವಿರುದ್ದವೂ ಅಲ್ಲ ಎಂಬುವುದು ಅವರನ್ನು ಹತ್ತಿರದಿಂದ ಬಲ್ಲವರಿಗೆ ಗೊತ್ತಿರುವ ಸತ್ಯ….

ಆಚಾರ್ ಬಳಿ ನಿಮ್ಮ ನಿಷ್ಟುರವಾದ ನಿಷ್ಕಲ್ಮಶ ಹಾಗೂ ರಾಜಿರಹಿತ ಹೋರಾಟವೇಕೆ ಎಂದು ಪ್ರಶ್ನೆ ಮಾಡಿದರೆ ಅವರ ಉತ್ತರ ಹೀಗಿರುತ್ತೆ.. ಅರಣ್ಯ ನಾಶವಾದರೆ ಭವಿಷ್ಯದಲ್ಲಿ ಆಮ್ಲಜನಕದ ಅಭಾವದಿಂದ ಮನುಷ್ಯನ ಆಯಸ್ಸಿನ ಮೇಲೆ ಪರಿಣಾಮ ಬಿರಲಿದೆ ಹಾಗು ಅರಣ್ಯ ನಾಶದಿಂದ ವನ್ಯಜೀವಿ ಮನುಷ್ಯನ ನಡುವೆ ಸಂಘರ್ಷ ನಡೆಯಲಿದೆ ಅಂತಾರೆ, ಮಲೆನಾಡಲ್ಲಿ ಅರಣ್ಯ ನಾಶ ತಡೆಯದೇ ಹೋದಲ್ಲಿ ದಿನನಿತ್ಯ ಆಮ್ಲಜನಕ ಕೊಂಡು ಸೇವೆಸೋ ಕಾಲ ದೂರವಿಲ್ಲ ಅನ್ನೋದು ಆಚಾರ್ ಅವರ ಅನಿಸಿಕೆಯಾಗಿದೆ

ನ್ಯಾಷನಲ್ ಪತ್ರಿಕೆ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ 2025 ಎಂಬ ಹೆಸರಿನ ಪ್ರಶಸ್ತಿಗೆ ಭಾಜನರಾದ ಗಿರೀಶ್ ಆಚಾರ್ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಅಭಿನಂದನೆಗಳನ್ನು ಸಲ್ಲಿಸುತ್ತದೆ…

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 hour ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

3 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

20 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

20 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

22 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago