ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ
ಶಿವಮೊಗ್ಗ : ಬಸ್ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. ನಗರದ KSRTC ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಬಸ್ ಹತ್ತುವಾಗ ವ್ಯಾನಿಟಿ ಬ್ಯಾಗ್‌ನಿಂದ ಕಳ್ಳತನವಾಗಿದೆ.
ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಬಸ್ ಹತ್ತಿದ್ದರು. ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ಗಮನಿಸಿದಾಗ ಜಿಪ್ ತೆರೆದಿರುವುದು ಗೊತ್ತಾಗಿದೆ. ಒಳಗಿದ್ದ ಪರ್ಸ್ ನಾಪತ್ತೆಯಾಗಿತ್ತು. ಅದರಲ್ಲಿ 75 ಸಾವಿರ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರ, 1500 ರೂ. ನಗದು, ವಿವಿಧೆ ಬ್ಯಾಂಕುಗಳ ಎಟಿಎಂ ಕಾರ್ಡುಗಳಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಸ್ ಹತ್ತುವಾಗ ಹೆಚ್ಚು ಜನ ದಟ್ಟಣೆ ಇತ್ತು. ಈ ಸಂದರ್ಭ ಕಳ್ಳರು ವ್ಯಾನಿಟಿ ಬ್ಯಾಗ್ ಜಿಪ್ ತೆಗೆದು ಕಳ್ಳತನ ಮಾಡಿದ್ದಾರೆ ಎಂದು ಗೀತಾ ಅವರು ಆರೋಪಿಸಿದ್ದಾರೆ.
ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…