ಸಮಾಜದ ಬೆಳೆವಣಿಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ

ಸಮಾಜದ ಬೆಳೆವಣಿಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ

ಭಾರತದ ಸಂವಿಧಾನದಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಲಿಂಗಬೇದ ನಿರ್ಮೂಲನೆ , ಸಮಾನತೆಯ  ಹಕ್ಕುಗಳನ್ನು ಕೊಡುಗೆ ನೀಡಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸಿಮಗೌಡರು ಎಂದು ಹೇಳಿದರು.

ಕ್ವೀನ್ ಬೀ ಕ್ಲಬ್ ಆಯೋಜಿಸಿದ್ದ ಗಣರಾಜ್ಯೋತ್ಸವ ಹಾಗೂ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಸಂಘಟಿತರಾಗುತ್ತಿದ್ದಾರೆ. ಈಗಿನ ಮಹಿಳೆಯರು ಜಾಲತಾಣದ ಬಲೆಗೆ ಮಾರಿ ಹೋಗಿದ್ದಾರೆ ಹಿಂದಿನಿಂದ ಬಂದಂಥ  ಮನೆಯಲ್ಲೇ ಕುಟ್ಟುವುದು ಬಿಸುವುದು ಇನ್ನು ಹಲವಾರು ರೀತಿಯ ಗೃಹ ಕೈಗಾರಿಕೆಯಲ್ಲಿ ತಿನ್ನುವ ಆಹಾರ ಪದಾರ್ಥಗಳನ್ನು ಮನೆಯಲ್ಲಿಯೇ ತಯಾರಿಸುತಿದ್ದರು. ಈ ಸಂದರ್ಭದಲ್ಲಿ ಮಹಿಳೆಯರು ಉದಾಹರಣೆಯಾಗಿ ಕುಟ್ಟುವುದು, ಬಿಸುವುದು, ಬಳೆ ತೋಡಿಸುದರ ಉದಾಹರಣೆಯಾದರು.ಈ ಸಮಾಜದ ಬೆಳೆವಣಿಗೆ ಮಹಿಳೆಯರ ಪಾತ್ರ ಬಹುಮುಖ್ಯವಾಗಿದ್ದು ಎಂದರು.

ಕ್ವೀನ್ ಬೀ ಕ್ಲಬ್ ಅಧ್ಯಕ್ಷರಾದ ಅನ್ನಪೂರ್ಣ ಆರ್. ಶೆಟ್ಟರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಭಾರತದ ಪ್ರತಿ ಪ್ರಜೆಗೂ ಮೂಲಭೂತ ಹಕ್ಕು ಮತ್ತು ಪ್ರಜಾಪ್ರಭುತ್ವ ಒದಗಿಸಿದ ಮಹತ್ವದ ಗಳಿಗೆಯನ್ನು ಸಂಭ್ರಮಿಸುವ ಸುದಿನವಿದು.  ಹಿಂತಹ ಮಹತ್ತರ ಕೊಡುಗೆಯನ್ನು ನೀಡಿದ ಅಂಬೇಡ್ಕರ ಅವರನ್ನು ನೆನೆಯುವ ಯುವ ದಿನ ಎಂದರು.

ಕಾರ್ಯಕ್ರಮದಲ್ಲಿ ಹಳ್ಳಿಸೋಗಡಿನ, ದಿನ ನಿತ್ಯದ ಕೆಲಸವಾದ ಬಿಸುವುದು, ಕುಟ್ಟುವುದು, ಸಂಕ್ರಾಂತಿಯ ಆಚರಣೆ ಪದ್ಧತಿ, ಬಲೆ ಇಡುವುದು ಹಾಗೂ ಶಾವಿಗೆ ಹೊಸಿಯುವುದಂತಹ ಮನೆಯಲ್ಲಿಯೇ ಮಾಡುತಿದ್ದ ಪದಾರ್ಥಗಳ ಪ್ರದರ್ಶನವನ್ನು ಈ ಕಾರ್ಯಕ್ರಮದಲ್ಲಿ ಮಾಡಲಾಯಿತು

ಈ ಸಂಧರ್ಭದಲ್ಲಿ ಕ್ವೀನ್ ಬೀ ಕ್ಲಬನ ಉಪಾಧ್ಯಕ್ಷರಾದ ಶ್ರೀಮತಿ ಜಯಶೀಲಾ ಮಾಮ್ಲೆಪಟ್ಟಣಶೆಟ್ಟರ, ಖಜಾಂಚಿ ಲತಾ ಕೊಲ್ಲಾವರ ಹಾಗೂ ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಶಿವಲೀಲಾ ಮಾಮ್ಲೆಪಟ್ಟಣಶೆಟ್ಟರ, ಶೋಭಾ ಮಾಮ್ಲೆಪಟ್ಟಣಶೆಟ್ಟರ ಮತ್ತು ನಿಲಾಂಬಿಕಾ ಮಾಮ್ಲೆಪಟ್ಟಣಶೆಟ್ಟರ ಪ್ರಾರ್ಥಿಸಿದರು. ಜ್ಯೋತಿ ಸಂಕಣ್ಣವರ ಸ್ವಾಗತಿಸಿದರು. ನಂದಾ ಕೂಲಿ ವಂದಿಸಿದರು.  ಸಹನಾ ಮಾಮ್ಲೆಪಟ್ಟಣಶೆಟ್ಟರ ನಿರೂಪಿಸಿದರು.

ವರದಿ  :  ನಿಂಗರಾಜ ಕುಡಲ್ ಹಾವೇರಿ ಜಿಲ್ಲೆ ಬಂಕಾಪುರ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 hour ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 hour ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

2 hours ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

10 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

23 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

24 hours ago