ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು


ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು

ರಿಪ್ಪನ್‌ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದ 2024-25 ನೇ ಸಾಲಿನ ಶಾಲಾ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪೊಷಕರು ಆಗಾಗ ಶಾಲೆಗೆ ಭೇಟಿ ನೀಡಿ ತಮ್ಮ ಮಕ್ಕಳ ಕಲಿಕೆ ಗುಣಮಟ್ಟವನ್ನು ವಿಚಾರಿಸುತ್ತಿರಬೇಕು ಆಗ ಮಕ್ಕಳಲ್ಲಿ ಸಹ ಭಯ ಮೂಡುತ್ತದೆ.ಸರ್ಕಾರ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಒಂದರಿಂದ ಪಿ.ಯು.ಸಿ ವರೆಗೆ ಉಚಿತ ಶಿಕ್ಷಣ, ಸಮವಸ್ತç, ಪಠ್ಯಪುಸ್ತಕ, ಬಿಸಿಯೂಟ,ಭಾಳೆಹಣ್ಣು,ಚಿಕ್ಕಿ ರಾಗಿಮಾಲ್ಟ್ ಹೀಗೆ ಹತ್ತು ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಒತ್ತು ನೀಡಲಾಗಿದ್ದು ಈ ಸೌಲಭ್ಯದ ಸದುಪಯೋಗಪಡೆಯಲು ಕರೆ ನೀಡಿದರು.

ಬರುವ ಶೈಕ್ಷಣಿಕ ವರ್ಷದಲ್ಲಿ ರಿಪ್ಪನ್‌ಪೇಟೆಗೆ ಕೆಪಿಎಸ್‌ಸಿ ಶಾಲೆ ಮಂಜೂರಾತಿಯಾಗಿದ್ದು ಸರ್ಕಾರ 60 ಕೋಟಿ ವೆಚ್ಚದ ಸುಸಜ್ಜಿತ ಕಟ್ಟಡ ನಿರ್ಮಾಣ ಕಾರ್ಯಕ್ಕೆ ನೀಲನಕ್ಷೆ ಸಿದ್ದಗೊಳಿಸಲಾಗಿ ಸರ್ಕಾರ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಇದರೊಂದಿಗೆ ಎಲ್.ಕೆ.ಜಿ.ಯಿಂದ ಪಿ.ಯು.ಸಿ ಒಂದೇ ಸೂರಿನಡಿ ನಡೆಸುವ ಸರ್ಕಾರದ ಯೋಜನೆಯಾಗಿದ್ದು ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಮತ್ತು ಮಾರುತಿಪುರ ಎರಡು ಕಡೆಯಲ್ಲಿ ಪ್ರಾರಂಭಗೊಳ್ಳಲಿದೆ ಎಂದ ಅವರು ಸಾಕಷ್ಟು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡಿದರೂ ಕೂಡಾ ನಮ್ಮ ಶಿಕ್ಷಕರು ಇರುವ ವ್ಯವಸ್ಥೆಯಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವ ಮೂಲಕ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ.ಪಬ್ಲಿಕ್ ಪರೀಕ್ಷೆಯಲ್ಲಿ ಹೊಸನಗರ ತಾಲ್ಲೂಕ್ ಎರಡನೇ ಸ್ಥಾನದಲ್ಲಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್.ಡಿ.ಎಂ.ಸಿ.ಅಧ್ಯಕ್ಷ ಡಿ.ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುಸ್ಕಾರ ವಿತರಿಸಿದರು.

ಗ್ರಾಮ ಪಂಚಾಯ್ತಿ ಆಧ್ಯಕ್ಷ ಧನಲಕ್ಷಿ,ಉಪಾಧ್ಯಕ್ಷ ಸುದೀಂದ್ರಪೂಜಾರಿ,ಗ್ರಾಮ ಪಂಚಾಯ್ತಿ ಸದಸ್ಯರಾದ ಡಿ.ಈ.ಮಧುಸೂದನ್,ಎನ್.ಚಂದ್ರೇಶ್, ಆಶೀಫ್‌ಭಾಷಾ,ಕೆರೆಹಳ್ಳಿ ರವೀಂದ್ರ,ಹನೀಫ್ ಭಾಷಾ, ಸಾರಾಭಿ, ವೇದಾವತಿ, ಹೆಚ್.ಎಸ್.ಗಣಪತಿ,ಕೆ.ಪ್ರಕಾಶ ಪಾಲೇಕರ್,ಟಿ.ಸುಂದರೇಶ್,ಎಸ್.ಡಿ.ಎಂ ಸಿ.ಸದಸ್ಯರಾದ ಲೀಲಾವತಿ,ಪುಣ್ಣೋಜಿರಾವ್, ಈಶ್ವರ,ನಿರಂಜನಮೂರ್ತಿ, ಆಶಾ,ಎಂ ರಫೀಕ್,ಉಷಾ,ಶೇಷಾಚಲ ಇನ್ನಿತರರು ಹಾಜರಿದ್ದರು.

ಉಪಪ್ರಾಚಾರ್ಯ ಕೆಸವಿನಮನೆ ರತ್ನಾಕರ್ ಸ್ವಾಗತಿಸಿದರು.ಸಹ ಶಿಕ್ಷಕ ಚಂದ್ರಪ್ಪ ನಿರೂಪಿಸಿದರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

18 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

19 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

23 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago