ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ.
ರಿಪ್ಪನ್ ಪೇಟೆ : ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೆರಿ ಮಹಿಳಾ ಜಾಗೃತಿ ವೇದಿಕೆ ಹಾಗೂ ಮಹಿಳಾ ಸಹಾಯ ಸಂಘದ ಸದಸ್ಯರು ಮತ್ತು ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರೋ ಹಿತ್ತಲು ಮಹಿಳಾ ಜಾಗೃತಿ ವೇದಿಕೆ ಹಾಗೂ ಸಮಸ್ತ ಮಹಿಳಾ ಸ್ವಹ ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಅಕ್ರಮ ಮಧ್ಯ ಮಾರಾಟದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿಸಾಮಾಜಿಕ ಹೋರಾಟಗಾರ ಟಿಆರ್ ಕೃಷ್ಣಪ್ಪ ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಪಟ್ಟಣದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆಯೊಂದಿಗೆ ವಿನಾಯಕ ವೃತಕ್ಕೆ ಆಗಮಿಸಿ ನಂತರ ಪೊಲೀಸ್ ಠಾಣೆಗೆ ಅಕ್ರಮ ಮಧ್ಯ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಪ್ರತಿಭಟನ ಸಭೆಯಲ್ಲಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಮಾತನಾಡಿ ಬೆಳ್ಳೂರು ಅರಸಾಳು ರಿ ಪ್ಪನ್ ಪೇಟೆ ಸೇರಿದಂತೆ ಎಲ್ಲಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿನ ಕೆಲವು ಚಿಲ್ಲರೆ ದಿನಸಿ ಅಂಗಡಿಗಳಲ್ಲಿ ಹಾಗೂ ಮನೆಗಳಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದ ಕೃಷಿಕರು ಹಾಗೂ ಕೂಲಿ ಕಾರ್ಮಿಕರು ಮದ್ಯ ವ್ಯಸನಿಗಳಾಗುತ್ತಿದ್ದಾರೆ.ಇದರಿಂದ ಗ್ರಾಮೀಣ ಪ್ರದೇಶದ ಬಡ ಕುಟುಂಬಗಳು ಹಾಗೂ ಕೂಲಿ ಕಾರ್ಮಿಕರ ಕುಟುಂಬಗಳು ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ. ಲ ಹಳ್ಳಿಗಳ ಅಂಗಡಿಗಳಲ್ಲಿ ಹಾಗೂ ಮನೆಗಳಲ್ಲಿ ಅಕ್ರಮವಾಗಿ ಮಧ್ಯವನ್ನು ಸರಬರಾಜು ಮಾಡುತ್ತಿರುವ ರಿಪ್ಪನ್ ಪೇಟೆ ಹಾಗೂ ಬೇರೆ ಬೇರೆ ಕಡೆಯ ಸಗಟು ವ್ಯಾಪಾರರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಮಾತ್ರ ಅಕ್ರಮ ಮದ್ಯ ಮಾರಾಟಕ್ಕೆ, ಅಬಕಾರಿ ಇಲಾಖೆ ಹಾಗೂ ರಕ್ಷಣಾ ಇಲಾಖೆಗಳ ಅಧಿಕಾರಿಗಳಿಗೆ ಅಕ್ರಮ ಮಧ್ಯ ಮಾರಾಟದ ಕುರಿತು ಗ್ರಾಮಸ್ಥರು ಅನೇಕ ಬಾರಿ ಮಾಹಿತಿಯನ್ನು ನೀಡಿದರು ಯಾವುದೇ ಕ್ರಮವನ್ನು ಕೈಗೊಳ್ಳದೆ ಅಕ್ರಮ ವಹಿವಾಟುಗಳಿಗೆ ಸಾತ್ ನೀಡುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು.
ಬೆಳ್ಳೂರು ಗ್ರಾಮಸ್ಥ ಕಟ್ಟೆ ನಾಗಪ್ಪ ಮಾತನಾಡಿ ಅಬಕಾರಿ ಇಲಾಖೆ ಹಾಗೂ ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಮಾರಾಟದ ಕುರಿತು ತನಿಖೆ ನಡೆಸಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವ ವ್ಯಕ್ತಿಗಳ ಮೇಲೆ ಹಾಗೂ ಸರಬರಾಜು ಮಾಡುತ್ತಿರುವ ಸಗಟು ವ್ಯಾಪಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ರಕ್ಷಣಾ ಇಲಾಖೆಯ ಅಧಿಕಾರಿಗಳ ಕಚೇರಿಯ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದೆಂದು ಹೇಳಿದರು.
ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಅವಡೆ ಶಿವಪ್ಪ, ಕಟ್ಟೆ ನಾಗಪ್ಪ, ಲಕ್ಷ್ಮಿಕಾಂತ್,ಪ್ರವೀಣ್. ರೇಣುಕಪ್ಪ ಅಡ್ಡೇರಿ, ತುಂಗಮ್ಮ. ದಾಕ್ಷಯಿಣಿ, ಅರುಣ್ ಕಟ್ಟೆ, ಪ್ರಭಾಕರ್ ಸೇರಿದಂತೆ ಇನ್ನಿತರರಿದ್ದರು.