ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ.
ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಗದ್ದೆಗೆ ಉರುಳಿ ಪಲ್ಟಿಯಾಗಿದೆ.
ಚಿಕ್ಕಕಣ್ಣೂರು ಗ್ರಾಮದ ಹನುಮಂತಪ್ಪ (50) . ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಲ್ಲೂರು ವಡ್ಡಿಗೇರಿ ಗ್ರಾಮದ ಲಕ್ಷ್ಮವ್ವ (46) ಮತ್ತು ಕಣಸೋಗಿ ಗ್ರಾಮದ ರೇಣುಕಮ್ಮ . (65) ಶಿಕಾರಿಪುರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್