ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು
ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬೆಳಗಾವಿಯ ತಾಯಿ-ಮಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಟ (50), ಮೇಘಾ ಹತ್ತರವಾಟ ಎಂದು ಗುರುತಿಸಲಾಗಿದೆ.
ಕಾಲ್ತುಳಿತದಲ್ಲಿ ಗಾಯಗೊಂಡ ಬಳಿಕ ಅವರನ್ನು ಇಂದು ಬೆಳಗ್ಗೆ ಪ್ರಯಾಗ್ರಾಜ್ದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಬೆಳಗಾವಿಯ ತಾಯಿ – ಮಗಳು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಮೃತ ಜ್ಯೋತಿ ಅವರ ಪತಿ ದೀಪಕ್ ಹತ್ತರವಾಟ ಅವರಿಗೆ ಬೆಳಗ್ಗೆಯಿಂದ ಇಬ್ಬರೂ ಸಂಪರ್ಕಕ್ಕೆ ಸಿಕ್ಕಿಲ್ಲ. ಫೋನ್ ರಿಂಗ್ ಆಗುತಿದ್ದರೂ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕದಲ್ಲಿದ್ದರು. ಮೂರು ದಿನಗಳ ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಪ್ರಯಾಗ್ರಾಜ್ಗೆ ಪ್ರಯಾಣ ಬೆಳೆಸಿದ್ದ 13 ಜನರ ತಂಡದಲ್ಲಿ ಜ್ಯೋತಿ ಹತ್ತರವಾಟ ಮತ್ತು ಮೇಘಾ ಹತ್ತರವಾಟ ಸೇರಿದ್ದರು. ಆದರೆ, ಘೋರ ದುರಂತದಲ್ಲಿ ತಾಯಿ-ಮಗಳು ಪ್ರಾಣ ಕಳೆದುಕೊಂಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ವಡಗಾವಿಯ ಅವರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು, ದುಃಖ ಮಡುಗಟ್ಟಿದೆ. ಸಂಬಂಧಿಕರು ಮತ್ತು ಸ್ನೇಹಿತರು ಅವರ ಮನೆಯತ್ತ ಧಾವಿಸುತ್ತಿದ್ದಾರೆ.
ಈ ಕುರಿತು ದೀಪಕ್ ಹತ್ತರವಾಟ ಮಾಧ್ಯಮದವರೊಂದಿಗೆ ಮಾತನಾಡಿ, “ಜ.26ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಪತ್ನಿ, ಮಗಳು ಮತ್ತು ಅವರ ಇಬ್ಬರು ಸ್ನೇಹಿತರು ಪ್ರಯಾಗ್ರಾಜ್ ಹೋಗಿದ್ದರು. ನಿನ್ನೆ ರಾತ್ರಿ ಇಬ್ಬರೂ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದರು. ಆದರೆ, ಇಂದು ಬೆಳಗ್ಗೆ ನಮ್ಮ ಸಂಪರ್ಕಕ್ಕೆ ಅವರು ಸಿಗಲೇ ಇಲ್ಲ. ನಮ್ಮವರ ಜೊತೆ ಹೋಗಿದ್ದ ಅವರ ಸ್ನೇಹಿತರು ಕಾಲ್ತುಳಿತ ಉಂಟಾಗಿದೆ ಎಂದು ತಿಳಿಸಿದರು. ಇದರಲ್ಲಿ ಪತ್ನಿ ಮತ್ತು ಮಗಳಿಗೆ ಗಂಭೀರವಾಗಿ ಗಾಯವಾಗಿದೆ ಎಂಬ ಮಾಹಿತಿ ಸಿಕ್ಕಿತ್ತು. ಮಧ್ಯಾಹ್ನ 3ರವರೆಗೆ ಏನೂ ಗೊತ್ತಾಗಲಿಲ್ಲ. ಕೊನೆಗೆ ಪ್ರಯಾಗ್ರಾಜ್ಗೆ ಕರೆದುಕೊಂಡು ಹೋಗಿದ್ದ ಚಿದಂಬರ ಪಾಟೀಲ ಅವರು ನಿಮ್ಮ ಪತ್ನಿ ಮತ್ತು ಮಗಳು ತೀರಿಕೊಂಡಿದ್ದಾರೆ ಎಂದು ವಿಷಯ ತಿಳಿಸಿದರು” ಎಂದು ವಿವರಿಸಿದರು.
“ಮಗಳು ಮೇಘಾ ಪದವಿ ಮುಗಿಸಿ, ಸ್ಟೇಷನರಿ ಅಂಗಡಿ ನಡೆಸುತ್ತಿದ್ದರು. ಪತ್ನಿ ಮನೆಯಲ್ಲೆ ಇರುತ್ತಿದ್ದರು. ದೊಡ್ಡ ಮಗಳಿಗೆ ಮದುವೆ ಮಾಡಿಕೊಟ್ಟಿದ್ದೆ. ಮೇಘಾಗೂ ಮದುವೆ ಮಾಡುವ ಚಿಂತನೆ ನಡೆಸಿದ್ದೆವು. 144 ವರ್ಷಗಳಿಗೆ ಒಮ್ಮೆ ಮಹಾ ಕುಂಭಮೇಳ ಬರುವುದರಿಂದ ತೆರಳಿದ್ದರು ಎಂದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…