RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ

ರಿಪ್ಪನ್‌ಪೇಟೆ : ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತವನ್ನು ಆದಷ್ ಶಮನಗೊಳಿಸಲು ಪಕ್ಷದ ವರಿಷ್ಠರು ಮುಂದಾಗಬೇಕು’ ಎಂದು   ಆಗ್ರಹಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಜೆಪಿ ಪಕ್ಷದ ಜಿಲ್ಲಾ ಹಾಗೂ ತಾಲೂಕ್ ಮಟ್ಟದ ಮುಖಂಡರು ಪತ್ರ ಬರೆಯಲು ಮುಂದಾಗಿದ್ದೇವೆ ಎಂದು ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಎಂ ಬಿ‌ ಮಂಜುನಾಥ್ ಹಾಗೂ ಜಿಲ್ಲಾ ಮುಖಂಡ  ನಾಗೇಂದ್ರ ಕಲ್ಲೂರು ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ವೀಡಿಯೋ ಇಲ್ಲಿ ವೀಕ್ಷಿಸಿ👆

ಭಾನುವಾರ ನಡೆದ ರಿಪ್ಪನ್‌ಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಂತರಿಕ ಭಿನ್ನಮತ ಎಂಬುದು ಸೆರಗಿನಲ್ಲಿ ಬೆಂಕಿಯನ್ನು ಕಟ್ಟಿಕೊಂಡಂತೆ. ಇದು ಉಲ್ಬಣಗೊಂಡರೆ ಪಕ್ಷವು ದುರ್ಬಲಗೊಳ್ಳುತ್ತದೆ . ಇದರಿಂದ ಜನಹಿತ ಕಾರ್ಯಗಳಿಗೆ ಅಡಚಣೆ ಎದುರಾಗುತ್ತದೆ. ಭಿನ್ನಮತ ಎಂಬುದು ಒಟ್ಟು ಜನಮಾನಸದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅದ್ದರಿಂದ ಭಿನ್ನಮತ ಮತ್ತೆ ಪುನರಾವರ್ತನೆ ಆಗದ ಹಾಗೆ ವರಿಷ್ಠರು ಕೂಡಲೇ ಶಮನ ಗೊಳಿಸುವುದಕ್ಕೆ ಕಾಳಜಿ ವಹಿಸಬೇಕಾಗಿದೆ’ ಎಂದರು.

ರಾಷ್ಟ್ರದಲ್ಲಿಯೇ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಉತ್ತಮ ಸಂಘಟನೆ ಇರುವಂತಹ ರಾಜ್ಯವಾಗಿದ್ದು ಆದರೆ ಇತ್ತೀಚಿನ ಕೆಲವು ತಿಂಗಳುಗಳಿಂದ ರಾಜ್ಯ ಮುಖಂಡರು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾಜಿ ಸಚಿವರು ವೈಯಕ್ತಿಕ ಟೀಕೆಗಳನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸುತ್ತಿರುವುದು ಮಾದ್ಯಮಗಳಲ್ಲಿ ಒರತಿದಿನ ಬಿತ್ತರವಾಗುತಿದ್ದು ಇದು ಕಾರ್ಯಕರ್ತರಿಗೆ ಇರಿಸುಮುರಿಸು ತರುವಂತಾಗಿದೆ.ಇನ್ನೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ಮುಂದುವರೆಸಿರುವುದು ಪಕ್ಷಕ್ಕಾಗಿ ಹಲವಾರು ವರ್ಷಗಳಿಂದ ದುಡಿಯುತ್ತಿರುವ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ‌ಮುಜುಗರ ಉಂಟುಮಾಡುತಿದ್ದು ಪಕ್ಷ ಸಂಘಟನೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.

ಆದ್ದರಿಂದ ಮಾದ್ಯಮಗಳ ಮೂಲಕ ಸಾರ್ವಜನಿಕವಾಗಿ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿರುವ ನಾಯಕರಾದ ಬಸವನಗೌಡ ಪಾಟೀಲ್ ಯತ್ನಾಳ್ ,ರಮೇಶ್ ಜಾರಕಿಹೊಳಿ ಹಾಗೂ ರಾಜ್ಯಾಧ್ಯಕ್ಷರ ನಡುವೆ ಉಂಟಾಗಿರುವ ಬಿರುಕನ್ನು ಹೈಕಮಾಂಡ್ ಸಮಕ್ಷಮದಲ್ಲಿ ಶಮನಗೊಳಿಸಬೇಕಾಗಿದೆ ಇಲ್ಲವಾದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಗಳ ಚುನಾವಣೆ ಹಾಗೂ ಪಕ್ಷದ ಸಾಂಸ್ಥಿಕ ಚುನಾವಣೆಗಳ ದುಷ್ಪರಿಣಾಮ ಬೀರಲಿದೆ ಎಂದರು.

ಈ ಸಂಧರ್ಭದಲ್ಲಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸುಂದರೇಶ್ , ಮುಖಂಡರಾದ ಸುರೇಶ್ ಸಿಂಗ್ , ನಾಗರತ್ನ ದೇವರಾಜ್ ,ಗಿರೀಶ್ ಜಂಬಳ್ಳಿ , ರಾಮಚಂದ್ರ ಬಳೆಗಾರ್ , ರೇಖಾ ರವಿ ,ಮುರುಳಿ ಕೆರೆಹಳ್ಳಿ ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

5 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

22 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago