RIPPONPETE | ಹುಲ್ಲು ಸಾಗಿಸುತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮ
ಹುಲ್ಲು ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ನಡೆದಿದೆ.
ಕಣಬಂದೂರಿನ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಒಣ ಹುಲ್ಲಿನ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಹೊತ್ತಿ ಉರಿದಿದೆ. ಸ್ಥಳೀಯರು , ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಅಯನೂರು ಮೂಲದ ವ್ಯಕ್ತಿಯೊಬ್ಬ ಕಣಬಂದೂರು , ಕರಡಿಗ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಒಣ ಹುಲ್ಲನ್ನು ಖರೀದಿಸಿ ಕೊಂಡೊಯ್ಯುತಿದ್ದಾಗ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಬೆಂಕಿ ಜ್ವಾಲೆ ಎಲ್ಲಾ ಕಡೆ ಹಬ್ಬಿಕೊಂಡಿದೆ.
ವಿಷಯ ತಿಳಿಯುತಿದ್ದಂತೆ ತಕ್ಷಣ ಸ್ಥಳಕ್ಕಾಗಮಿಸಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ ಆ ನಂತರ ಹೊಸನಗರ ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಆದರೆ ಲಾರಿ ಹಾಗೂ ಹುಲ್ಲು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…