POSTMAN NEWS

ನೈಜ ಸುದ್ದಿ ನೇರ ಬಿತ್ತರ..

Ripponpete|ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

GridArt 20250122 185419692.jpg

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು.

ವೀಡಿಯೋ ಇಲ್ಲಿ ವೀಕ್ಷಿಸಿ👆

ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.

ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಬಾರಿ ಶ್ರೀ ಮಾರಿಕಾಂಬ ಜಾತ್ರೆ ನಡೆಯುತ್ತದೆ.

ಉತ್ತಮ ಆರೋಗ್ಯ ರೋಗ-ರುಜಿನಗಳು ಬರದಂತೆ. ತಾವು ಬೆಳೆದ ಕೃಷಿ ಮತ್ತು ಕೃಷಿ ಉತ್ಪನ್ನಗಳು. ಸಾಕು ಪ್ರಾಣಿಗಳ ಸಂರಕ್ಷಣೆ. ಮಕ್ಕಳಾಗದಿದ್ದರೆ ಮಕ್ಕಳಾಗುವ ಬಗ್ಗೆ ತಮ್ಮ ಇಷ್ಟಾರ್ಥಗಳು ನೆರವೇರಲಿ ಎಂದು  ಭಕ್ತರು ಹರಕೆಯನ್ನು ಹೊರುತ್ತಾರೆ. ಮಾರಿಕಾಂಬ ದೇವಿಯ ದರ್ಶನದಿಂದ ಲಕ್ಷಾಂತರ ಜನರು ಒಳಿತನ್ನು ಕಂಡಿದ್ದಾರೆ, ಕಾಣುತ್ತಲೂ ಇದ್ದಾರೆ.

ಸಂಸದ ಬಿ ವೈ ರಾಘವೇಂದ್ರ , ಶಾಸಕ ಬೇಳೂರು ಗೋಪಾಲಕೃಷ್ಣ , ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ , ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಇನ್ನಿತರರು ದೇವಿಯ ದರ್ಶನ ಪಡೆದರು.

ಈ ಸಂಧರ್ಭದಲ್ಲಿ ಹೊಸನಗರ ತಾಲೂಕ್ ತಹಶೀಲ್ದಾರ್ ರಶ್ಮಿ ಹೆಚ್ ಜೆ,ರಕ್ಷಣಾ ಇಲಾಖೆಯ ವೃತ್ತ ನಿರೀಕ್ಷಕ ಗುರಣ್ಣ ಹೆಬ್ಬಾಳ್ , ಪಿಎಸ್‌ಐ ಪ್ರವೀಣ್ ಎಸ್ ಪಿ , ಕಂದಾಯ ಇಲಾಖೆ ಅಧಿಕಾರಿಗಳಾದ ಗೌತಮ್ , ಅಪ್ರೋಜ್ , ಮಂಜುನಾಥ್ ಹುಂಚದಕಟ್ಟೆ ಮತ್ತು ದೇವಸ್ಥಾನ ಆಡಳಿತ ಸಮಿತಿ ,ಮುಜರಾಯಿ ಇಲಾಖೆ ಹಾಗೂ ರಕ್ಷಣಾ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.