Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು.
ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.
ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಬಾರಿ ಶ್ರೀ ಮಾರಿಕಾಂಬ ಜಾತ್ರೆ ನಡೆಯುತ್ತದೆ.
ಉತ್ತಮ ಆರೋಗ್ಯ ರೋಗ-ರುಜಿನಗಳು ಬರದಂತೆ. ತಾವು ಬೆಳೆದ ಕೃಷಿ ಮತ್ತು ಕೃಷಿ ಉತ್ಪನ್ನಗಳು. ಸಾಕು ಪ್ರಾಣಿಗಳ ಸಂರಕ್ಷಣೆ. ಮಕ್ಕಳಾಗದಿದ್ದರೆ ಮಕ್ಕಳಾಗುವ ಬಗ್ಗೆ ತಮ್ಮ ಇಷ್ಟಾರ್ಥಗಳು ನೆರವೇರಲಿ ಎಂದು ಭಕ್ತರು ಹರಕೆಯನ್ನು ಹೊರುತ್ತಾರೆ. ಮಾರಿಕಾಂಬ ದೇವಿಯ ದರ್ಶನದಿಂದ ಲಕ್ಷಾಂತರ ಜನರು ಒಳಿತನ್ನು ಕಂಡಿದ್ದಾರೆ, ಕಾಣುತ್ತಲೂ ಇದ್ದಾರೆ.
ಸಂಸದ ಬಿ ವೈ ರಾಘವೇಂದ್ರ , ಶಾಸಕ ಬೇಳೂರು ಗೋಪಾಲಕೃಷ್ಣ , ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ , ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಇನ್ನಿತರರು ದೇವಿಯ ದರ್ಶನ ಪಡೆದರು.
ಈ ಸಂಧರ್ಭದಲ್ಲಿ ಹೊಸನಗರ ತಾಲೂಕ್ ತಹಶೀಲ್ದಾರ್ ರಶ್ಮಿ ಹೆಚ್ ಜೆ,ರಕ್ಷಣಾ ಇಲಾಖೆಯ ವೃತ್ತ ನಿರೀಕ್ಷಕ ಗುರಣ್ಣ ಹೆಬ್ಬಾಳ್ , ಪಿಎಸ್‌ಐ ಪ್ರವೀಣ್ ಎಸ್ ಪಿ , ಕಂದಾಯ ಇಲಾಖೆ ಅಧಿಕಾರಿಗಳಾದ ಗೌತಮ್ , ಅಪ್ರೋಜ್ , ಮಂಜುನಾಥ್ ಹುಂಚದಕಟ್ಟೆ ಮತ್ತು ದೇವಸ್ಥಾನ ಆಡಳಿತ ಸಮಿತಿ ,ಮುಜರಾಯಿ ಇಲಾಖೆ ಹಾಗೂ ರಕ್ಷಣಾ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿದರು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…